ಪರಿಹಾರಧನಕ್ಕೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಸಲಹೆ!

7
ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸರು

ಪರಿಹಾರಧನಕ್ಕೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಸಲಹೆ!

Published:
Updated:

ಬೆಂಗಳೂರು: ಅಮಾಯಕನೊಬ್ಬನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವ ಮಂಗಳೂರಿನ ಬರ್ಕೆ ಠಾಣೆ ಪೊಲೀಸರ ವಿರುದ್ಧ ಪರಿಹಾರಧನ ಕೋರಿ ಅರ್ಜಿ ದಾಖಲಿಸುವಂತೆ ಹೈಕೋರ್ಟ್ ಸಲಹೆ ನೀಡಿದೆ.

ಮಸಾಜ್ ಸೆಂಟರ್‌ನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಿ ಮೂರು ದಿನ ಜೈಲಿನಲ್ಲಿಟ್ಟ ಪ್ರಕರಣದ ವಿಚಾರಣೆ ಸೋಮವಾರ ನಡೆಸಿದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿದ್ದ ಏಕ ಸದಸ್ಯ ಪೀಠ ಈ ಸಲಹೆ ನೀಡಿದೆ.

ಮಸಾಜ್ ಸೆಂಟರ್‌ನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಹೇಂದ್ರ ಕುಮಾರ್ ಪಾಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದರು. ಇದರಿಂದ ಅವರು ಮೂರು ದಿನ ಜೈಲು ವಾಸ ಅನುಭವಿಸಿ, ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ತನಿಖೆ ನಡೆಸಿ, ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಪಾಲ್‌ ಹೆಸರು ಕೈ ಬಿಟ್ಟಿದ್ದಾರೆ’ ಎಂದು ಅರ್ಜಿದಾರ ಪರ ವಕೀಲ ಪಿ.ಪಿ. ಹೆಗ್ಡೆ ವಾದಿಸಿದರು.

‘ಪೊಲೀಸರು ಸುಳ್ಳು ಪ್ರಕರಣದಲ್ಲಿ ಅಮಾಯಕನಾದ ಅರ್ಜಿದಾರರನ್ನು ಸಿಲುಕಿಸಿದ್ದಾರೆ. ಇದರಿಂದ ಅರ್ಜಿದಾರ ಕಿರುಕುಳ, ಅವಮಾನ, ಮಾನಸಿಕ ಹಿಂಸೆ ಅನುಭಿಸಿದ್ದಾನೆ. ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಅರ್ಜಿದಾರರ ವಿರುದ್ಧದ ಎಫ್‌ಐಆರ್ ರದ್ದುಪಡಿಸುವಂತೆ’ ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ‘ದೋಷಾರೋಪ ಪಟ್ಟಿಯಿಂದ ಅರ್ಜಿದಾರರ ಹೆಸರು ಕೈ ಬಿಟ್ಟಿರುವಾಗ, ಎಫ್‌ಐಆರ್ ರದ್ದುಪಡಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದರೆ, ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸರ ವಿರುದ್ಧ ಸಂತ್ರಸ್ತ ಪರಿಹಾರ ಧನ ಕೋರಿ ತಕರಾರು ಅರ್ಜಿ ಸಲ್ಲಿಸಬಹುದು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry