ಜಿ.ಟಿ.ದೇವೇಗೌಡ ಖಾತೆ ಬದಲು ಸಾಧ್ಯತೆ

7

ಜಿ.ಟಿ.ದೇವೇಗೌಡ ಖಾತೆ ಬದಲು ಸಾಧ್ಯತೆ

Published:
Updated:

ಬೆಂಗಳೂರು: ಜೆಡಿಎಸ್‌ ಸಚಿವ ಜಿ.ಟಿ.ದೇವೇಗೌಡ ಅವರಿಗೆ ನೀಡಲಾಗಿರುವ ಉನ್ನತ ಶಿಕ್ಷಣ ಖಾತೆ ಬದಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಎಚ್‌.ಡಿ.ಕುಮಾರಸ್ವಾಮಿ ಮತ್ತು ಎಚ್‌.ಡಿ.ದೇವೇಗೌಡ ಈ ಸಂಬಂಧ ಜಿ.ಟಿ.ದೇವೇಗೌಡರ ಜತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾವು ಎಂಟನೇ ತರಗತಿಯವರೆಗೆ ಶಿಕ್ಷಣ ಪಡೆದಿದ್ದು, ಉನ್ನತ ಶಿಕ್ಷಣ ಖಾತೆ ನೀಡಿರುವ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ನಡೆಯುತ್ತಿದ್ದು, ಮುಜುಗರ ಆಗುತ್ತಿದೆ. ಖಾತೆಯನ್ನು ಸಮರ್ಥವಾಗಿ ನಿಭಾಯಿಸುವುದೂ ಕಷ್ಟವಾಗಬಹುದು ಎಂದು ಜಿ.ಟಿ.ದೇವೇಗೌಡ ಹೇಳಿದ್ದು, ಅವರು ನೀಡಿರುವ ಕಾರಣ ವರಿಷ್ಠರಿಗೆ ಮನವರಿಕೆ ಆಗಿದೆ. ಒಂದೆರಡು ದಿನಗಳಲ್ಲಿ ತೀರ್ಮಾನ ಪ್ರಕಟವಾಗಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry