‘ಆಯುಷ್ಮಾನ್‌ ಭಾರತ’: 10 ರಾಜ್ಯಗಳಿಂದ ನಾಳೆ ಒಪ್ಪಂದಕ್ಕೆ ಸಹಿ

7

‘ಆಯುಷ್ಮಾನ್‌ ಭಾರತ’: 10 ರಾಜ್ಯಗಳಿಂದ ನಾಳೆ ಒಪ್ಪಂದಕ್ಕೆ ಸಹಿ

Published:
Updated:

ನವದೆಹಲಿ: ಕೇಂದ್ರದ ಮಹತ್ವಾಕಾಂಕ್ಷಿ ಆಯುಷ್ಮಾನ್‌ ಭಾರತ ಯೋಜನೆಯ (ಆರೋಗ್ಯ ವಿಮೆ) ಅನುಷ್ಠಾನ ಸಂಬಂಧ ಕೇಂದ್ರ ಸರ್ಕಾರವು ಹತ್ತಕ್ಕೂ ಹೆಚ್ಚು ರಾಜ್ಯಗಳ ಜತೆಗೆ ಬುಧವಾರ ಒಪ್ಪಂದ ಮಾಡಿಕೊಳ್ಳಲಿದೆ.

ಪ್ರತಿ ಕುಟುಂಬಕ್ಕೆ ₹5 ಲಕ್ಷ ಆರೋಗ್ಯ ವಿಮೆ ಒದಗಿಸುವ ಯೋಜನೆ ಇದು. 10 ಕೋಟಿಗೂ ಹೆಚ್ಚು ಕುಟುಂಬಗಳು ಇದರ ವ್ಯಾಪ್ತಿಗೆ ಬರಲಿವೆ. 13 ರಾಜ್ಯಗಳು ಈಗಾಗಲೇ ಒಪ್ಪಂದ ಮಾಡಿಕೊಂಡಿವೆ. .

ಕರ್ನಾಟಕ ಈವರೆಗೆ ಒಪ್ಪಂದಕ್ಕೆ ಸಹಿ ಹಾಕಿಲ್ಲ. ಇಲ್ಲಿನ ಹೊಸ ಸರ್ಕಾರ ಜೂನ್‌ ಕೊನೆಯೊಳಗೆ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಪಶ್ಚಿಮ ಬಂಗಾಳ, ಕೇರಳ, ದೆಹಲಿ ಮತ್ತು ಒಡಿಶಾ ರಾಜ್ಯಗಳು ಒಪ್ಪಂದಕ್ಕೆ ಸಹಿ ಹಾಕುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry