ಆಯುಕ್ತರ ಆದೇಶ; ಕ್ರಮ ಜರುಗಿಸದಂತೆ ನಿರ್ದೆಶನ

7
ಬಾಬಾ ಬುಡನ್‌ಗಿರಿ ದತ್ತಾತ್ರೇಯ ಪೀಠದ ಪೂಜಾ ವಿಧಾನ

ಆಯುಕ್ತರ ಆದೇಶ; ಕ್ರಮ ಜರುಗಿಸದಂತೆ ನಿರ್ದೆಶನ

Published:
Updated:

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿ ದತ್ತಾತ್ರೇಯ ಪೀಠದ ಪೂಜಾ ವಿಧಾನದ ಬಗ್ಗೆ ರಾಜ್ಯ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆ ಆಯುಕ್ತರು ಹೊರಡಿಸಿರುವ ಆದೇಶದನ್ವಯ ಜೂನ್ 18ರವರೆಗೆ ಯಾವುದೇ ಕ್ರಮ ಜರುಗಿಸದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನಿರ್ದೇಶಿಸಿದೆ.

ಆಯುಕ್ತರ ಆದೇಶ ಪ್ರಶ್ನಿಸಿ ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಈ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು. ರಾಜ್ಯ ಸರ್ಕಾರ, ಹಿಂದೂ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆ, ಚಿಕ್ಕಮಗಳೂರು ಜಿಲ್ಲಾಧಿಕಾರಿ, ತಹಸೀಲ್ದಾರ್ ಮತ್ತು ಸೈಯದ್ ಗೌಸ್ ಮೊಹಿದ್ದೀನ್ ಶಾ ಖಾದ್ರಿ ಅವರಿಗೆ ನೋಟಿಸ್ ಜಾರಿಗೊಳಿಸಿತು.

ಅರ್ಜಿದಾರರ ಪರ ವಕೀಲ ಜಗದೀಶ್ ಬಾಳಿಗ, ‘ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಲ್ಲಿಸಿದ ವರದಿಯನ್ನು ಒಪ್ಪಿ ರಾಜ್ಯ ಸರ್ಕಾರ ದತ್ತ ಪೀಠಕ್ಕೆ ಮುಸ್ಲಿಂ ಮೌಲ್ವಿಯೊಬ್ಬರನ್ನು ಅರ್ಚಕರನ್ನಾಗಿ ನೇಮಿಸಿದೆ. ಆದರೆ, ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವಾಗಲೇ ನ್ಯಾ. ನಾಗಮೋಹನ ದಾಸ್ ಅವರ ಸಮಿತಿ ರಚಿಸಲಾಗಿತ್ತು. ಆ ಸಮಿತಿಯು ದತ್ತ ಪೀಠಕ್ಕೆ ಭೇಟಿಯೇ ನೀಡಿಲ್ಲ. ಆದರೂ ಹಲವು ಶಿಫಾರಸುಗಳನ್ನು ಮಾಡಿದೆ. ಅದನ್ನು ಹಿಂದಿನ ಸರ್ಕಾರ ಒಪ್ಪಿದೆ. ತರಾತುರಿಯಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಮುಂದಾಗಿದೆ’ ಎಂದರು.

ರಾಜ್ಯ ಅಡ್ವೋಕೇಟ್ ಜನರಲ್ ಉದಯ ಹೊಳ್ಳ, ‘ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು. ಮುಂದಿನ ವಿಚಾರಣೆವರೆಗೂ ಪ್ರಕರಣ

ದಲ್ಲಿ ಯಾವುದೇ ಕ್ರಮ ಜರುಗಿಸುವುದಿಲ್ಲ’ ಎಂದು ಹೇಳಿದರು. ಇದಕ್ಕೆ ಒಪ್ಪಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry