ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಯ ಮತ ಎಣಿಕೆ ಆರಂಭ

7

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಯ ಮತ ಎಣಿಕೆ ಆರಂಭ

Published:
Updated:
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಯ ಮತ ಎಣಿಕೆ ಆರಂಭ

ಕಲಬುರ್ಗಿ: ಜೂನ್‌ 8ರಂದು ನಡೆದ ಈಶಾನ್ಯ ಪದವೀಧರ ಮತಕ್ಷೇತ್ರದ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ.

ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದಲ್ಲಿ ಮತ ಎಣಿಕೆ ನಡೆಯುತ್ತಿದ್ದು. ಮತ ಎಣಿಕೆಗಾಗಿ ಒಟ್ಟು 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‌ನ ಮತ ಎಣಿಕೆಗೆ ಮೇಲ್ವಿಚಾರಕ ಹಾಗೂ ಸೂಕ್ಷ್ಮ ವೀಕ್ಷಕರನ್ನು ನೇಮಕ ಮಾಡಲಾಗಿದೆ. 

ಮತಕ್ಷೇತ್ರದಲ್ಲಿ ಒಟ್ಟು 82,054 ಮತದಾರರ ಪೈಕಿ 53,384 ಮತದಾರರು ಮತ ಚಲಾಯಿಸಿದ್ದು. ಶೇ 67.5ರಷ್ಟು ಮತದಾನವಾಗಿತ್ತು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಕನ್ನಡ ಚಳವಳಿ ವಾಟಾಳ್ ಪಕ್ಷ ಹಾಗೂ ಪಕ್ಷೇತರರು ಸೇರಿದಂತೆ ಒಟ್ಟು 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತ ಎಣಿಕೆಗಾಗಿ ಬಿಗಿ ಭದ್ರತೆ ಒದಗಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry