ಜಮ್ಮು ಕಾಶ್ಮೀರ: ಇಬ್ಬರು ಪೊಲೀಸರನ್ನು ಹತ್ಯೆಗೈದ ಉಗ್ರರು

7

ಜಮ್ಮು ಕಾಶ್ಮೀರ: ಇಬ್ಬರು ಪೊಲೀಸರನ್ನು ಹತ್ಯೆಗೈದ ಉಗ್ರರು

Published:
Updated:
ಜಮ್ಮು ಕಾಶ್ಮೀರ: ಇಬ್ಬರು ಪೊಲೀಸರನ್ನು ಹತ್ಯೆಗೈದ ಉಗ್ರರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಕೋರ್ಟ್‌ ಕಟ್ಟಡದ ಮೇಲೆ ದಾಳಿ ನಡೆಸಿದ ಉಗ್ರರು ಇಬ್ಬರು ಪೊಲೀಸರನ್ನು ಹತ್ಯೆಗೈದಿದ್ದಾರೆ.

ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಭಾರತೀಯ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಕೊರ್ಟ್ ಆವರಣದೊಳಗೆ ನುಗ್ಗಿದ ಮೂರು ನಾಲ್ಕು ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಇಬ್ಬರು ಪೊಲೀಸರನ್ನು ಕೊಂದಿದ್ದಾರೆ. ಕೋರ್ಟ್‌ ಆವರಣದ ಸುತ್ತಮುತ್ತ ಕಟ್ಟೆಚ್ಚರ ವಹಿಸಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ವಕ್ತಾರ ತಿಳಿಸಿದ್ದಾರೆ.

ಅನಂತನಾಗ್ ಜಿಲ್ಲೆಯ ಸದಾರ್ ಎಂಬಲ್ಲಿ ನಡೆದ ಉಗ್ರರ ಮತ್ತೊಂದು ಪ್ರತ್ಯೇಕ ದಾಳಿಯಲ್ಲಿ 10 ಸಿಆರ್‌ಪಿಎಫ್‌ ಯೋಧರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಎರಡು ದಾಳಿಗಳ ಹಿಂದೆ ಜೈಶೆ–ಇ–ಮಹಮ್ಮದ್ ಉಗ್ರ ಸಂಘಟನೆಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry