ಮಾನನಷ್ಟ ಮೊಕದ್ದಮೆ: ಮಹಾರಾಷ್ಟ್ರ ಕೋರ್ಟ್‌ಗೆ ಹಾಜರಾಗಲಿರುವ ರಾಹುಲ್ ಗಾಂಧಿ

7

ಮಾನನಷ್ಟ ಮೊಕದ್ದಮೆ: ಮಹಾರಾಷ್ಟ್ರ ಕೋರ್ಟ್‌ಗೆ ಹಾಜರಾಗಲಿರುವ ರಾಹುಲ್ ಗಾಂಧಿ

Published:
Updated:
ಮಾನನಷ್ಟ ಮೊಕದ್ದಮೆ: ಮಹಾರಾಷ್ಟ್ರ ಕೋರ್ಟ್‌ಗೆ ಹಾಜರಾಗಲಿರುವ ರಾಹುಲ್ ಗಾಂಧಿ

ಮುಂಬೈ: ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಹಾರಾಷ್ಟ್ರದ ಭಿವಾಂಡಿ ನ್ಯಾಯಾಲಯದ ಮುಂದೆ ಇಂದು ಹಾಜರಾಗಲಿದ್ದಾರೆ.

‘ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹತ್ಯೆ ಹಿಂದೆ ಆರ್‌ಎಸ್‌ಎಸ್‌ ಕೈವಾಡವಿದೆ’ ಎಂದು ರಾಹುಲ್ ಚುನಾವಣಾ ಜಾಥಾದಲ್ಲಿ ಹೇಳಿದ್ದರು. ಈ ಸಂಬಂಧ ಆರ್‌ಎಸ್‌ಎಸ್‌ ಕಾರ್ಯಕರ್ತ ರಾಜೇಶ್‌ ಕುಂಟೆ 2014ರಲ್ಲಿ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಎರಡು ದಿನಗಳ ಕಾಲ ಮಹಾರಾಷ್ಟ್ರ ಪ್ರವಾಸ ಕೈಗೊಂಡಿರುವ ರಾಹುಲ್ ಈಗಾಗಲೇ ಮುಂಬೈ ತಲುಪಿದ್ದಾರೆ.

ಕೋರ್ಟ್ ವಿಚಾರಣೆ ಮುಗಿದ ಬಳಿಕ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಹಾಗೂ ಮುಂಬೈನ ಕಾಂಗ್ರೆಸ್ ಕಾರ್ಪೋರೇಟರ್‌ಗಳ ಜೊತೆ ನಾಗರಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry