ಖಾಸಗಿ ಕೃಷಿ ಕಾಲೇಜು ಸ್ಥಾಪನೆ ಬೇಡ:ಒತ್ತಾಯ

7

ಖಾಸಗಿ ಕೃಷಿ ಕಾಲೇಜು ಸ್ಥಾಪನೆ ಬೇಡ:ಒತ್ತಾಯ

Published:
Updated:
ಖಾಸಗಿ ಕೃಷಿ ಕಾಲೇಜು ಸ್ಥಾಪನೆ ಬೇಡ:ಒತ್ತಾಯ

ಬೆಂಗಳೂರು: ಖಾಸಗಿ ಕೃಷಿ ಕಾಲೇಜು ಸ್ಥಾಪನೆಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿ, ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತರಗತಿ  ಬಹಿಷ್ಕರಿಸಿ, ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ನಾಯಕ್ ಭವನದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿ ಮುಖಂಡ ವಿ.ರಮೇಶ್ ಮಾತನಾಡಿ, ‘ನಿರುದ್ಯೋಗ ಸಮಸ್ಯೆ ಮತ್ತು ಗುಣಮಟ್ಟದ ಶಿಕ್ಷಣದ ಕೊರತೆ ಉಂಟಾಗುವುದರಿಂದ ರಾಜ್ಯ

ದಲ್ಲಿ ಪ್ರಾರಂಭವಾಗಿರುವ ಖಾಸಗಿ ಕೃಷಿ ಕಾಲೇಜುಗಳಿಗೆ ಮಾನ್ಯತೆ ನೀಡಬಾರದು ಈ ಬಗ್ಗೆ ಸರ್ಕಾರಿ ಕೃಷಿ ವಿಶ್ವವಿದ್ಯಾಲಯಗಳು ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದರೂ ಸರ್ಕಾರಗಳು ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂದರು.

ಕೃಷಿ ವಿಶ್ವವಿದ್ಯಾಲಯದ ಪರೀಕ್ಷಾ ನೀತಿ ಅಳವಡಿಸದೇ ಇರುವುದು ಹಾಗೂ ಖಾಸಗಿ ಕೃಷಿ ಪದವಿಗಳನ್ನು ಕೃಷಿ ಇಲಾಖೆ ನೌಕರಿಗೆ ಪರಿಗಣಿಸಲು ಸಾಧ್ಯವಿಲ್ಲದ ಕಾರಣ ಖಾಸಗಿ ಕೃಷಿಕಾಲೇಜುಗಳಿಗೆ ಮಾನ್ಯತೆ ನೀಡಬಾರದು ಎಂದರು. ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಪ್ರವೀಣ್ ಮಾತನಾಡಿ, ಕೃಷಿಶಿಕ್ಷಣವನ್ನು ಖಾಸಗೀಕರಣಗೊಳಿಸಬಾರದು. ಕೃಷಿ ಸಂಬಂಧಿತ ಕಾಲೇಜುಗಳ ಅಡಿಯಲ್ಲಿ ಪ್ರತಿ ಜಿಲ್ಲೆಗೆ ತಲಾ ಒಂದು ಸರ್ಕಾರಿ ಕೃಷಿ ಕಾಲೇಜು ತೆರೆಯಬೇಕು ಎಂದರು.

ಕುಲಪತಿ ಡಾ.ಎಂ.ಎಸ್.ನಟರಾಜ್ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry