ವರ್ಗಾವಣೆಗೆ ಅರ್ಜಿ ಆಹ್ವಾನ

7

ವರ್ಗಾವಣೆಗೆ ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೌಕರರ 2018–19ರ ಸಾಲಿನ ಸಾರ್ವತ್ರಿಕ ವರ್ಗಾವಣೆಯನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದೆ.

ತಮ್ಮ ವ್ಯಾಪ್ತಿಗೆ ಒಳಪಡುವ ವರ್ಗಾವಣೆ ಅರ್ಜಿಗಳನ್ನು ಆಯಾ ಜಿಲ್ಲೆಯ ವೈದ್ಯಾಧಿಕಾರಿಗಳು ಜೂನ್‌ 12ರಿಂದ 23ರವರೆಗೆ ಸ್ವೀಕರಿಸಲು ಅವಕಾಶ ನೀಡಲಾಗಿದೆ. ವೈದ್ಯಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಯು, ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಕಚೇರಿ ಮುಖ್ಯಸ್ಥರ ಮೂಲಕ ಸಲ್ಲಿಸಬೇಕು ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಪತಿ–ಪತ್ನಿ, ವಿಧವೆ, ಅಂಗವಿಕಲತೆ, ವೈದ್ಯಕೀಯ ಕಾರಣಗಳು ಇದ್ದರೆ ನಿಯಮಾನುಸಾರ ಪರಿಶೀಲಿಸುವುದಾಗಿ ಇಲಾಖೆ ಹೇಳಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry