16 ಕೈದಿಗಳ ವಿರುದ್ಧ ಎಫ್‌ಐಆರ್

7
ಪೆರೋಲ್‌ ಕೈದಿಗಳ ಪರಾರಿ ಪ್ರಕರಣ

16 ಕೈದಿಗಳ ವಿರುದ್ಧ ಎಫ್‌ಐಆರ್

Published:
Updated:

ಬೆಂಗಳೂರು: ‘ಪೆರೋಲ್ ಮೇಲೆ ತೆರಳಿ ಪುನಃ ಜೈಲಿಗೆ ಶರಣಾಗದೆ ಇದ್ದ ಒಟ್ಟು 42 ಕೈದಿಗಳ ಪೈಕಿ 24 ಕೈದಿಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನೂ ಪತ್ತೆಯಾಗದಿರುವ 16 ಕೈದಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ’ ಎಂದು ರಾಜ್ಯ ಪ್ರಾಸಿಕ್ಯೂಷನ್‌ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್‌ ಹಾಗೂ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಈ ವಿವರಣೆ ನೀಡಲಾಗಿದೆ. ಇದಕ್ಕೆ ತೃಪ್ತಿ ವ್ಯಕ್ತಪಡಿಸಿರುವ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry