ಆದೇಶ ಕಾಯ್ದಿರಿಸಿದ ಹೈಕೋರ್ಟ್‌

7
ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ–ಮಧ್ಯಂತರ ಅರ್ಜಿ ವಿಚಾರಣೆ

ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Published:
Updated:
ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು: ‘ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆಗಳಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಹೀಗಾಗಿ ಮುಖ್ಯ ಪರೀಕ್ಷೆಯ ಮೌಲ್ಯಮಾಪನದ ಆಧಾರದ ಮೇಲೆ ಅಭ್ಯರ್ಥಿಗಳ ಸಂದರ್ಶನಕ್ಕೆ ಅವಕಾಶ ನೀಡಬೇಕು’ ಎಂದು ಕೆಪಿಎಸ್‌ಸಿ ಹೈಕೋರ್ಟ್‌ಗೆ ಮನವಿ ಮಾಡಿದೆ.

‘ಕೆಪಿಎಸ್‌ಸಿ ನೇಮಕಾತಿಗಾಗಿ ನಡೆಸಲಾಗಿರುವ ಮುಖ್ಯ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ’ ಎಂಬುದನ್ನು ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದ ಅನುಸಾರ ಹೈಕೋರ್ಟ್ ಪುನಃ ಪ್ರಕರಣದ ವಿಚಾರಣೆ ಆರಂಭಿಸಿದೆ.

ಈ ಸಂಬಂಧ ಅವಕಾಶ ವಂಚಿತ ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ಸಲ್ಲಿಸಿರುವ ಮಧ್ಯಂತರ ಅರ್ಜಿಗಳನ್ನು ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿದ್ದು ಇವುಗಳ ಮೇಲಿನ ತೀರ್ಪು ಕಾಯ್ದಿರಿಸಿದೆ.

2011ನೇ ಸಾಲಿನ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವಂತೆ ಕನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) 2016ರ ಅ.19 ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಆರ್.ರೇಣುಕಾಂಬಿಕೆ ಹಾಗೂ ಅವಕಾಶ ವಂಚಿತ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ಏನಿದು ಪ್ರಕರಣ?

2011ನೇ ಸಾಲಿನ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವಂತೆ ಕನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) 2016ರ ಅ.19 ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಆರ್.ರೇಣುಕಾಂಬಿಕೆ ಹಾಗೂ ಅವಕಾಶ ವಂಚಿತ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್, ಕೆಎಟಿ ಆದೇಶ ರದ್ದುಗೊಳಿಸಿ 2018ರ ಮಾರ್ಚ್‌ 9ರಂದು ಆದೇಶಿಸಿತ್ತು.

ಇದನ್ನು ಪ್ರಶ್ನಿಸಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದನ್ನು ಸುಪ್ರೀಂ ಕೋರ್ಟ್ ಮತ್ತೆ ಹೈಕೋರ್ಟ್ ಅಂಗಳಕ್ಕೆ ತಳ್ಳಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry