ಖಾಸಗಿ ಬಸ್‌ ಅಪಘಾತ : 17 ಮಂದಿ ಸಾವು, 35 ಮಂದಿಗೆ ಗಾಯ

7

ಖಾಸಗಿ ಬಸ್‌ ಅಪಘಾತ : 17 ಮಂದಿ ಸಾವು, 35 ಮಂದಿಗೆ ಗಾಯ

Published:
Updated:
ಖಾಸಗಿ ಬಸ್‌ ಅಪಘಾತ : 17 ಮಂದಿ ಸಾವು, 35 ಮಂದಿಗೆ ಗಾಯ

ಲಖ್ನೋ: ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಇಂದು ಮುಂಜಾನೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬಸ್ ಪಲ್ಟಿಯಾಗಿ 17 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 35 ಮಂದಿ ಗಾಯಗೊಂಡಿದ್ದಾರೆ. ಅತಿವೇಗದಲ್ಲಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಸಿದ ಪೊಲೀಸರು ಗಾಯಾಳುಗಳನ್ನು ಅತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದರಲ್ಲಿ ಮೂವರ ಸ್ಥಿತಿ ತುಂಬಾ ಗಂಭೀರವಾಗಿದೆ.

ಅಪಘಾತದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಂತಾಪ ಸೂಚಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ನಿರ್ದೇಶನ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry