ದಕ್ಷಿಣ ಕೊಡಗಿನಲ್ಲಿ ಮುಂದುವರಿದ ಮಳೆ

7

ದಕ್ಷಿಣ ಕೊಡಗಿನಲ್ಲಿ ಮುಂದುವರಿದ ಮಳೆ

Published:
Updated:
ದಕ್ಷಿಣ ಕೊಡಗಿನಲ್ಲಿ ಮುಂದುವರಿದ ಮಳೆ

ಮಡಿಕೇರಿ: ಕೊಡಗು ಜಿಲ್ಲೆಯ ದಕ್ಷಿಣ ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ.

ಮಂಗಳವಾರ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದ್ದು, ಕೇರಳ– ಕರ್ನಾಟಕ ಗಡಿಭಾಗವಾದ ಮಾಕುಟ್ಟದಲ್ಲಿ ಮರಬಿದ್ದು ಸಂಪರ್ಕ ಕಡಿತವಾಗಿದೆ. ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸುತ್ತಿವೆ. ಜತೆಗೆ, ಅಲ್ಲಲ್ಲಿ ಮರಗಳು ಉರುಳಿವೆ. ಇರ್ಪು ಜಲಾಶಯ ವ್ಯಾಪ್ತಿಯಲ್ಲಿ ಮಳೆಯ ಅಬ್ಬರಕ್ಕೆ ಲಕ್ಷ್ಮಣ ತೀರ್ಥದಲ್ಲಿ ಮತ್ತಷ್ಟು ನೀರು ಏರಿಕೆಯಾಗಿದೆ.

ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಯ ಅವಧಿಯಲ್ಲಿ ಕೊಡಗು ಜಿಲ್ಲೆಯ ಸರಾಸರಿ 102.65 ಮಿ.ಮೀ ಮಳೆಯಾಗಿದೆ.

ನಾಪೋಕ್ಲು 194, ಭಾಗಮಂಡಲ 131, ಹುದಿಕೇರಿ 318, ಶ್ರೀಮಂಗಲ 320, ಪೊನ್ನಂಪೇಟೆ 225 ಮಿ.ಮೀ ಮಳೆಯಾಗಿದೆ.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry