ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ: ಉಚಿತ ಬಸ್‍ಪಾಸ್‍ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Last Updated 13 ಜೂನ್ 2018, 9:59 IST
ಅಕ್ಷರ ಗಾತ್ರ

ಬೆಳ್ತಂಗಡಿ: ರಾಜ್ಯದ ಎಲ್ಲಾ ವರ್ಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಒತ್ತಾಯಿಸಿ
ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಸೋಮವಾರ  ಬೆಳ್ತಂಗಡಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕುತ್ಯಾರು ದೇವಸ್ಥಾನದ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿ ಬಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.

ಸರ್ಕಾರವು ಎಲ್ಲಾ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ಗ್ರಾಮೀಣ ಭಾಗದಿಂದ ಬಸ್ ಪಾಸ್ ಹೊಂದಿದ ವಿದ್ಯಾರ್ಥಿಗಳು ನಗರ ಸಾರಿಗೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕು.

ರಾಜ್ಯದಲ್ಲಿ ಕೆಲವೊಂದು ಗ್ರಾಮೀಣ ಭಾಗಗಳು ಬಸ್ ವ್ಯವಸ್ಥೆಯಿಂದ ವಂಚಿತವಾಗಿದ್ದು, ಅಂತಹ ಪ್ರದೇಶಗಳಿಗೆ ಸರ್ಕಾರ ಬಸ್‍ಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿ, ಹಲವು ಬೇಡಿಕೆಯುಳ್ಳ ಮನವಿಯನ್ನು ಬೆಳ್ತಂಗಡಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಯವರಿಗೆ ನೀಡಲಾಯಿತು.

ಜಿಲ್ಲಾ ಸಂಚಾಲಕ ಪ್ರಜ್ವಲ್, ಸಹ ಸಂಚಾಲಕ ಸಂದೇಶ್ ಗೌಡ ಕಣಿಯೂರು, ತಾಲೂಕು ಸಂಚಾಲಕ ತೀಕ್ಷಿತ್ ಕೆ., ನಗರ ಕಾರ್ಯದರ್ಶಿ ಸುಮಂತ್ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT