ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪ್ರಧಾನಿ ಮೋದಿ ಫಿಟ್ನೆಸ್ ಚಾಲೆಂಜ್

7

ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪ್ರಧಾನಿ ಮೋದಿ ಫಿಟ್ನೆಸ್ ಚಾಲೆಂಜ್

Published:
Updated:
ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪ್ರಧಾನಿ ಮೋದಿ ಫಿಟ್ನೆಸ್ ಚಾಲೆಂಜ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಫಿಟ್ನೆಸ್‌ ಸವಾಲು ನೀಡಿ ಬುಧವಾರ ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ. ಇದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಹೃದಯದ ಸಮಸ್ಯೆಯಿಂದ ಬಳಲುತ್ತಿರುವ ಕುಮಾರಸ್ವಾಮಿಗೆ ಸವಾಲು ಒಡ್ಡಿರುವುದಕ್ಕೆ ಜೆಡಿಎಸ್‌ ರಾಷ್ಟ್ರೀಯ ವಕ್ತಾರ ಡ್ಯಾನಿಷ್‌ ಆಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವ್ಯಕ್ತಿಯ ಅನಾರೋಗ್ಯವನ್ನು ಅಣಕಿಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

‘ದೈಹಿಕ ಫಿಟ್ನೆಸ್‌ ಮಾತ್ರ ಮುಖ್ಯವಾಗಿದ್ದರೆ ಪ್ರಧಾನಿ ಮತ್ತು ಮುಖ್ಯಮಂತ್ರಿಗಳಾಗಿ ಪೈಲ್ವಾನರು ಅಥವಾ ಬೌನ್ಸರ್‌ಗಳನ್ನು ನಾವು ಹೊಂದಿರಬೇಕಾಗುತ್ತದೆ. ಆಡಳಿತ ನಡೆಸುವುದಕ್ಕಾಗಿ ಜನರು ಪ್ರಧಾನಿ ಮತ್ತು ಮುಖ್ಯಮಂತ್ರಿಗಳನ್ನು ನೇಮಿಸುತ್ತಾರೆ. ರಾಜ್ಯ ಮತ್ತು ದೇಶದ ಅಭಿವೃದ್ಧಿಯೇ ಮುಖ್ಯವಾಗಬೇಕು’ ಎಂದು ಆಲಿ ಹೇಳಿದ್ದಾರೆ.

ಮೋದಿ ಅವರ ಫಿಟ್ನೆಸ್‌ ಸವಾಲು ಹಿಂದೆಯೂ ಟೀಕೆಗೆ ಒಳಗಾಗಿತ್ತು. ತೈಲ ಬೆಲೆ ಇಳಿಸುವ ಮತ್ತು ಬೆಲೆ ಏರಿಕೆ ತಡೆಯುವ ಸವಾಲನ್ನು ಮೋದಿ ಅವರಿಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ಒಡ್ಡಿದ್ದರು.

ಗಡಿಯಾಚಿನಿಂದ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್‌ಎಫ್‌ನ ನಾಲ್ವರು ಯೋಧರು ಮೃತಪಟ್ಟ ದಿನವೇ ಪ್ರಧಾನಿ ಮೋದಿ ಅವರು ‘ಪಿಟ್ನೆಸ್‌ ವಿಡಿಯೊ’ ಬಿಡುಗಡೆ ಮಾಡಿದ್ದಾರೆ. ಇದು ಯೋಧರಿಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್‌ ಮುಖಂಡ ಪ್ರಮೋದ್‌ ತಿವಾರಿ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರವು ಕಳೆದ ನಾಲ್ಕು ವರ್ಷಗಳಲ್ಲಿ ದೇಶದ ಗಡಿ ರಕ್ಷಿಸುವಲ್ಲಿ ವಿಫಲವಾಗಿದೆ. ಇದು ದುರ್ಬಲ ಮತ್ತು ಹೇಡಿ ಸರ್ಕಾರ ಎಂದು ಅವರು ಆಪಾದಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry