‘ಲಕ್ಷ್ಮಿ ಹೆಬ್ಬಾಳಕರ ಸ್ಥಿತಿ ನನ್ನದೂ’

7

‘ಲಕ್ಷ್ಮಿ ಹೆಬ್ಬಾಳಕರ ಸ್ಥಿತಿ ನನ್ನದೂ’

Published:
Updated:

ಬೆಳಗಾವಿ: ‘ತಮಗೆ ಸಚಿವ ಸ್ಥಾನ ತಪ್ಪಲು ಪ್ರಭಾವಿಗಳೇ ಕಾರಣವೆಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳುತ್ತಿದ್ದಾರೆ. ಇದೇ ಮಾತನ್ನೇ ನಾನು ಕೂಡ ಹೇಳುತ್ತಿದ್ದೇನೆ. ಅವರು ಕಣ್ಣೀರು ಹಾಕುತ್ತ ಹೇಳುತ್ತಾರೆ; ನಾನು ಹಾಕಲ್ಲ. ಅಷ್ಟೇ ವ್ಯತ್ಯಾಸ!’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿನ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ ಪಾಲಿನ ಇನ್ನೂ ಆರು ಸಚಿವ ಸ್ಥಾನಗಳು ಭರ್ತಿಯಾಗಬೇಕಾಗಿದೆ. ಎರಡನೇ ಹಂತದ ವಿಸ್ತರಣೆಯಲ್ಲಿ ಸಚಿವ ಸ್ಥಾನ ಬೇಡವೆಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ,ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry