ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ

7

ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ

Published:
Updated:

ಹಲಗೂರು (ಮಳವಳ್ಳಿ): ತಾಲ್ಲೂಕಿನ ಪ್ರವಾಸಿ ತಾಣ ಮುತ್ತತ್ತಿಯ ಕಾವೇರಿ ನದಿ ದಡದಲ್ಲಿ ಭಕ್ತರು ಮತ್ತು ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕಿರುಗಾವಲು ಗ್ರಾಮದ ಪುಟ್ಟಸ್ವಾಮಿ ಅವರ ಪುತ್ರ ವೆಂಕಟೇಶ್ (42) ಮೃತಪಟ್ಟವರು.

ಬೆಂಗಳೂರು ಜೆ.ಪಿ ನಗರದಲ್ಲಿ ವಾಸವಾಗಿದ್ದು, ಗಾರ್ಮೆಂಟ್‌ ಒಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಸ್ನೇಹಿತರ ಜತೆ ಮುತ್ತತ್ತಿಗೆ ಪ್ರವಾಸಕ್ಕೆಂದು ಬಂದಿದ್ದರು. ಹೆಜ್ಜೇನು ದಾಳಿಯಿಂದ ಜ್ಞಾನ ತಪ್ಪಿ ಬಿದ್ದರು. ಸಾತನೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತನ ಕಣ್ಣುಗಳನ್ನು ಪೋಷಕರು ದಾನ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry