ಅಟಲ್‌ ಶೀಘ್ರ ಗುಣಮುಖ: ಏಮ್ಸ್‌ ನಿರ್ದೇಶಕರ ವಿಶ್ವಾಸ

7

ಅಟಲ್‌ ಶೀಘ್ರ ಗುಣಮುಖ: ಏಮ್ಸ್‌ ನಿರ್ದೇಶಕರ ವಿಶ್ವಾಸ

Published:
Updated:

ನವದೆಹಲಿ (ಪಿಟಿಐ): ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌ (ಏಮ್ಸ್‌) ನಿರ್ದೇಶಕ ಡಾ.ರಣದೀಪ್‌ ಗುಲೇರಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ವಾಜಪೇಯಿ ಅವರಿಗೆ ಡಯಾಲಿಸಿಸ್‌ ಮಾಡಲಾಗಿದೆ. ಮೂತ್ರಪಿಂಡದ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ಸಹಜವಾಗಿ ಕಾರ್ಯ ನಿರ್ವಹಿಸುತ್ತಿದೆ’ ಎಂದು ಗುಲೇರಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮೂತ್ರಪಿಂಡದ ಸೋಂಕು ಮತ್ತು ಉಸಿರಾಟದ ತೊಂದರೆಯ ಕಾರಣ ವಾಜಪೇಯಿ ಅವರನ್ನು ಇದೇ 11ರಂದು ಆಸ್ಪತ್ರೆಗೆ

ದಾಖಲಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry