ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಕು ಸಾಗಣೆ ಹಡಗಿನಲ್ಲಿ ಬೆಂಕಿ: ಸಿಬ್ಬಂದಿಗೆ ಗಂಭೀರ ಗಾಯ

Last Updated 14 ಜೂನ್ 2018, 10:19 IST
ಅಕ್ಷರ ಗಾತ್ರ

ಕೊಚ್ಚಿ/ಕೇರಳ:‘ಎಂವಿ ನಳಿನಿ’ ಸರಕು ಸಾಗಣೆ ಹಡಗಿನಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದ್ದು, ಇದರಲ್ಲಿನ 22 ಸಿಬ್ಬಂದಿ ಪೈಕಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಗಾಯಗೊಂಡ ಸಿಬ್ಬಂದಿಯನ್ನು ಕೊಚ್ಚಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೌಕಾಪಡೆಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ’ ಎಂದು ರಕ್ಷಣಾ ವಕ್ತಾರ ತಿಳಿಸಿದ್ದಾರೆ.

ಹಡಗಿನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸಿಬ್ಬಂದಿಯ ರಕ್ಷಣೆಗಾಗಿ ಸಾಕಷ್ಟು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಕಾರ್ಯಾಚರಣೆ ಅನಿವಾರ್ಯತೆ ಎದುರಾದರೆ ‘ಸೀ ಕಿಂಗ್ 42ಸಿ’ ಹೆಲಿಕಾಪ್ಟರ್‌ ಅನ್ನು ಕಳುಹಿಸಿಕೊಡಲಾಗುವುದು. ಭಾರತೀಯ ಕರಾವಳಿ ರಕ್ಷಣಾ ಪಡೆ ‘ಚಾರ್ಲಿ’ ಎಂಬ ಹಡಗನ್ನು ಕಳುಹಿಸಿಕೊಟ್ಟಿದೆ ಎಂದು ರಕ್ಷಣಾ ವಕ್ತಾರ ತಿಳಿಸಿದ್ದಾರೆ.

ಈ ಹಡಗು ‘ನಾಪ್ತಾ’ ಎಂಬ ರಾಸಾಯನಿಕ ಟ್ಯಾಂಕರ್‌ ಅನ್ನು ಹೊತ್ತೊಯ್ಯುತ್ತಿತ್ತು ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT