ಬಾಲಕಿ ಮೇಲೆ ಅತ್ಯಾಚಾರ ಯತ್ನ

7

ಬಾಲಕಿ ಮೇಲೆ ಅತ್ಯಾಚಾರ ಯತ್ನ

Published:
Updated:

ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ 30 ವರ್ಷದ ಭದ್ರತಾ ಸಿಬ್ಬಂದಿಯೊಬ್ಬನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಗುರುವಾರ ರಾತ್ರಿ ಬೆಳ್ಳಂದೂರಿನ ಕಸವನಹಳ್ಳಿಯಲ್ಲಿ ನಡೆದಿದೆ.

ಆಸ್ಸಾಂ ಮೂಲದ ಹೀರಾ ದಾದ್‌ ಅತ್ಯಾಚಾರಕ್ಕೆ ಯತ್ನಿಸಿದ್ದು, ಪ್ಲೇ ಹೋಂವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದಾನೆ. ಬಾಲಕಿ ಉತ್ತರ ಕರ್ನಾಟಕ ಮೂಲದವಳು. ಈಕೆಯ ಪಾಲಕರು ಕಸವನಹಳ್ಳಿಯಲ್ಲಿ ನೆಲೆಸಿದ್ದು, ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ 9ರ ಸುಮಾರಿಗೆ ತರಕಾರಿ ಮಾರುಕಟ್ಟೆ ಹೋಗುತ್ತಿದ್ದ ಹೀರಾ ರಸ್ತೆಯಲ್ಲಿ ಆಟ ಆಡುತ್ತಿದ್ದ ಬಾಲಕಿಯನ್ನು ನೋಡಿ, ಅವಳನ್ನು ಹಿಡಿದು, ಬಾಯಿಮುಚ್ಚಿಸಿ ಹತ್ತಿರದಲ್ಲೇ ಇರುವ ಕತ್ತಲು ಆವರಿಸಿದ್ದ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಓಡಿಬಂದು ಬಾಲಕಿಯನ್ನು ರಕ್ಷಿಸಿ, ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry