ಮೇಲ್ವಿಚಾರಕಿಯರ ಹುದ್ದೆಗೆ ಬಡ್ತಿ:ಮನವಿ

7

ಮೇಲ್ವಿಚಾರಕಿಯರ ಹುದ್ದೆಗೆ ಬಡ್ತಿ:ಮನವಿ

Published:
Updated:

ಬೆಂಗಳೂರು: ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿರುವ ಪದವೀಧರ ಅಂಗನವಾಡಿ ಕಾರ್ಯಕರ್ತೆಯರಿಗೆ ಮೇಲ್ವಿಚಾರಕಿಯರ ಹುದ್ದೆಗೆ ಬಡ್ತಿ ನೀಡಬೇಕು’ ಎಂದು ಕರ್ನಾಟಕ ರಾಜ್ಯ ಪದವೀಧರ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಸದಸ್ಯರು ಒತ್ತಾಯಿಸಿದರು‌.

‘ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ಇಲಾಖಾ ವೃಂದ ಹಾಗೂ ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡುವ ಸಂಬಂಧ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡು ಕಾರ್ಯಕರ್ತೆಯರಿಗೆ ಬಡ್ತಿ ನೀಡಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷೆ ಎಲ್‌. ಶಿವಲಿಂಗಮ್ಮ ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry