ಉಚಿತ ಬಸ್‌ಪಾಸ್ ನೀಡಲು ಆಗ್ರಹ

7

ಉಚಿತ ಬಸ್‌ಪಾಸ್ ನೀಡಲು ಆಗ್ರಹ

Published:
Updated:

ಗುಬ್ಬಿ: ಪಟ್ಟಣದ ಬಸ್ ನಿಲ್ದಾಣದ ಬಳಿ ಗುರುವಾರ ಬಸ್‌ಪಾಸ್ ವಂಚಿತ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಪರಿಷತ್‍ನ ಕಾರ್ಯಕರ್ತರು ನಗರದೆಲ್ಲೆಡೆ ಬೃಹತ್ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಯಾವುದೇ ಭೇದ ಭಾವವಿಲ್ಲದೆ ಎಲ್ಲಾ ಶಾಲಾ- ಕಾಲೇಜಿನ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವ ಭರವಸೆಯನ್ನು ಈ ಹಿಂದಿನ ಸರ್ಕಾರ ಕೊಟ್ಟಿತ್ತು. ಈ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡದೆ ಅನ್ಯಾಯ ಮಾಡಿದೆ ಎಂದು ದೂರಿದರು.

ತಹಶೀಲ್ದಾರ್ ವೆಂಕಟೇಶಯ್ಯ ಪ್ರತಿಭಟನಾ ಸ್ಥಳಕೆ ಬಂದು ಮನವಿ ಸ್ವೀಕರಿಸಿದರು. ಎಬಿವಿಪಿ ನಗರ ಕಾರ್ಯದರ್ಶಿ ಹರ್ಷಿತಾ, ರಾಜ್ಯ ಸಹ ಕಾರ್ಯದರ್ಶಿ ಚಂದನ್, ವಿದ್ಯಾರ್ಥಿ ಮುಖಂಡರಾದ ಮಧು, ಪುನಿತ್, ಶೀಲಾ, ಸರಸ್ವತಿ, ರೇಖಾ, ಜ್ಞಾನೇಶ್, ನವೀನ್, ಲತಾ ರಮ್ಯಾ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry