ಕೊಲೆ ಪ್ರಕರಣ: ಆರೋಪಿಗಳ ಬಂಧನ ಅವಧಿ ವಿಸ್ತರಣೆ

7

ಕೊಲೆ ಪ್ರಕರಣ: ಆರೋಪಿಗಳ ಬಂಧನ ಅವಧಿ ವಿಸ್ತರಣೆ

Published:
Updated:
ಕೊಲೆ ಪ್ರಕರಣ: ಆರೋಪಿಗಳ ಬಂಧನ ಅವಧಿ ವಿಸ್ತರಣೆ

ಉಡುಪಿ: ದನದ ವ್ಯಾಪಾರಿ ಹುಸೇನಬ್ಬ ಕೊಲೆ ಪ್ರಕರಣದಲ್ಲಿ 10 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜೂನ್ 28 ರವರೆಗೆ ವಿಸ್ತರಿಸಲಾಗಿದೆ.

ಕಾರವಾರ ಜೈಲಿನಲ್ಲಿದ್ದ 7 ಆರೋಪಿಗಳನ್ನು ಹಾಗೂ ಮಂಗಳೂರು ಜೈಲಿನಲ್ಲಿದ್ದ ಒಬ್ಬ ಆರೋಪಿಯನ್ನು ಶುಕ್ರವಾರ ಬಿಗಿ ಭದ್ರತೆಯಲ್ಲಿ ಉಡುಪಿ ನ್ಯಾಯಾಲಯಕ್ಕೆ ಕರೆತರಲಾಯಿತು. ಅನಾರೋಗ್ಯದ ಕಾರಣ ನೀಡಿ ಹಿರಿಯಡ್ಕ ಪಿಎಸ್‌ಐ ಡಿ.ಎನ್‌.ಕುಮಾರ್ ಹಾಗೂ ಇಬ್ಬರು ಪೊಲೀಸ್ ಸಿಬ್ಬಂದಿ ಹಾಜರಾಗಿರಲಿಲ್ಲ. ಉಳಿದ ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಯಿತು. ‍‍[Related]

ವಿಚಾರಣೆ ನಡೆಸಿದ ನ್ಯಾಯಾಧೀಶರು 11 ಆರೋಪಿಗಳ ಬಂಧನದ ಅವಧಿಯನ್ನು ಇದೇ ತಿಂಗಳ 28ರಂದು ವಿಸ್ತರಿಸಿ ಆದೇಶ ಹೊರಡಿಸಿದರು. ವಿಚಾರಣೆ ವಿಚಾರ ತಿಳಿದು ಆರೋಪಿಗಳ ಕುಟುಂಬಸ್ಥರು, ಸ್ನೇಹಿತರು ಹೆಚ್ಚಿನ ಸಂಖ್ಯೆಯಲ್ಲಿ ನ್ಯಾಯಾಲಯದ ಎದುರು ಜಮಾಯಿಸಿದ್ದರು. ನ್ಯಾಯಾಲಯದಿಂದ ಆದೇಶ ಹೊರ ಬೀಳುತ್ತಿದ್ದಂತೆ 6 ಆರೋಪಿಗಳನ್ನು ಕಾರವಾರ ಜೈಲಿಗೆ ಹಾಗೂ ಒಬ್ಬನನ್ನು ಮಂಗಳೂರು ಜೈಲಿಗೆ ಕರೆದೊಯ್ಯಲಾಯಿತು.

ಈ ಮಧ್ಯೆ ಗುರುವಾರ ಹುಸೇನಬ್ಬ ಅವರ ಮರಣೋತ್ತರ ಪರೀಕ್ಷಾ ವರದಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಅದೇ ದಿನ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ್ದ ನ್ಯಾಯಾಧೀಶರು ಇದೇ 18ಕ್ಕೆ ಆದೇಶವನ್ನು ಕಾಯ್ದಿರಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !