ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉಪಚುನಾವಣೆಯಲ್ಲಿ ಸ್ಪರ್ಧೆ’

Last Updated 15 ಜೂನ್ 2018, 19:30 IST
ಅಕ್ಷರ ಗಾತ್ರ

ಮದ್ದೂರು: ‘ಮುಂಬರುವ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ. ಸ್ಪರ್ಧೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಜೆಡಿಎಸ್‌ ನಾಯಕಿ ಡಾ.ಲಕ್ಷ್ಮಿ ಅಶ್ವಿನ್‌ಗೌಡ ಇಲ್ಲಿ ಶುಕ್ರವಾರ ಹೇಳಿದರು.

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸಿ.ಎಸ್‌.ಪುಟ್ಟರಾಜು ರಾಜೀನಾಮೆ ನೀಡಿದ ಕಾರಣ ಉಪಚುನಾವಣೆ ನಡೆಯಲಿದೆ. ಉಪ ಚುನಾವಣೆ ಮಾತ್ರವಲ್ಲದೇ 2019ರಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧೆ ಮಾಡುವಂತೆ ಜೆಡಿಎಸ್ ವರಿಷ್ಠರು ಸೂಚಿಸಿದ್ದಾರೆ. ಅದರಂತೆ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇನೆ’ ಎಂದು ಹೇಳಿದರು.

ಮಳವಳ್ಳಿ ತಾಲ್ಲೂಕು ಕೋಡಿಹಳ್ಳಿ ಗ್ರಾಮದವರಾದ ಅವರು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಕಿಮ್ಸ್‌) ಎಂಬಿಬಿಎಸ್‌ ಪೂರೈಸಿದ್ದಾರೆ. ಪತಿ ಅಶ್ವಿನ್‌ಗೌಡ ಕೂಡ ಐಆರ್‌ಎಸ್‌ ಅಧಿಕಾರಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT