‘ಸಾರಿಗೆ ನಿಗಮದ ನೌಕರರಿಗೆ 1 ಲಕ್ಷ ಮನೆ’

7

‘ಸಾರಿಗೆ ನಿಗಮದ ನೌಕರರಿಗೆ 1 ಲಕ್ಷ ಮನೆ’

Published:
Updated:

ಮದ್ದೂರು: ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ನೌಕರರಿಗಾಗಿ 1 ಲಕ್ಷ ಮನೆ ನಿರ್ಮಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಶೀಘ್ರ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಇಲ್ಲಿ ಶುಕ್ರವಾರ ಪ್ರಕಟಿಸಿದರು.

ಸಚಿವರಾದ ಬಳಿಕ ಮೊದಲ ಬಾರಿಗೆ ಪಟ್ಟಣಕ್ಕೆ ಬಂದ ಅವರು, ಬಹಿರಂಗ ಸಮಾವೇಶದಲ್ಲಿ ಮಾತನಾಡಿದರು. ಈ ಯೋಜನೆಯಲ್ಲಿ ಮನೆ ಪಡೆಯಲು ಇಚ್ಛಿಸುವ ನೌಕರರಿಗೆಶೇ 4ರ ದರದಲ್ಲಿ ಸಾಲ ಸೌಲಭ್ಯ ನೀಡಲು ಯೋಜಿಸಲಾಗಿದೆ ಎಂದರು.

‘ರಾಮನಗರ ಸೇರಿದಂತೆ ಜಿಲ್ಲೆಯ ಎಲ್ಲ ಬಸ್‌ ನಿಲ್ದಾಣಗಳನ್ನು ಆಧುನೀಕರಣಗೊಳಿಸಲಾಗುವುದು. ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಬಸ್‌ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಉಚಿತವಾಗಿಬಸ್‌ ಪಾಸ್‌ ವಿತರಿಸುವ ಸಂಬಂಧ ಈಗಾಗಲೇ ಶಿಕ್ಷಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಹಣ ಬಿಡುಗಡೆಯಾಗುತ್ತಿದ್ದಂತೆ ಉಚಿತವಾಗಿ ಪಾಸ್‌ ವಿತರಿಸುವ ಕಾರ್ಯ ಆರಂಭಗೊಳ್ಳಲಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry