ಶುಕ್ರವಾರ, ಫೆಬ್ರವರಿ 28, 2020
19 °C

18ರಿಂದ ವರ್ಗಾವಣೆ ಕೌನ್ಸೆಲಿಂಗ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

18ರಿಂದ ವರ್ಗಾವಣೆ ಕೌನ್ಸೆಲಿಂಗ್‌

ಬೆಂಗಳೂರು: ಚುನಾವಣೆಯ ಕಾರಣದಿಂದ ವಿಳಂಬವಾಗಿದ್ದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರು ಹಾಗೂ ಪದವಿ ಪೂರ್ವ ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್‌ ಅನ್ನು ಇದೇ 18ರಿಂದ ನಡೆಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.

ಕಳೆದ ಶೈಕ್ಷಣಿಕ ವರ್ಷದ ಕೊನೆಯಲ್ಲಿ ನಡೆಯಬೇಕಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ಮೂರು ಬಾರಿ ಮುಂದೂಡಲಾಗಿತ್ತು. ಶಿಕ್ಷಕರು ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ್ದು, ಕೌನ್ಸೆಲಿಂಗ್‌ ಪ್ರಕ್ರಿಯೆ ಮಾತ್ರ ಬಾಕಿ ಉಳಿದಿತ್ತು.

ಈ ಹಿಂದಿನ ಆದೇಶದಂತೆ ಉಪನಿರ್ದೇಶಕರ ಕಚೇರಿಯಲ್ಲಿ ನಡೆಯುತ್ತಿದ್ದ ಕೌನ್ಸೆಲಿಂಗ್‌ ಈ ವರ್ಷ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ (ಬಿಇಒ) ಕಚೇರಿಯಲ್ಲಿ ನಡೆಯಲಿದೆ. ಖಾಲಿಯಿರುವ ಹುದ್ದೆಗಳ ಪಟ್ಟಿಯನ್ನು ಬಿಇಒ ಕಚೇರಿಯ ಕಂಪ್ಯೂಟರ್‌ನಲ್ಲೇ ತೋರಿಸಿ, ಅಲ್ಲಿಯೇ ಹುದ್ದೆಯ ಸ್ಥಳ ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ನಂತರ ಉಪನಿರ್ದೇಶಕರು ಆದ್ಯತೆ ಮೇರೆಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು