7

ರಾಯಚೂರು ಜಿ.ಪಂ.ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವು

Published:
Updated:
ರಾಯಚೂರು ಜಿ.ಪಂ.ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವು

ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕು ಕ್ಯಾದಿಗೇರಾ ಜಿಲ್ಲಾ ಪಂಚಾಯತ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂದೀಪ ನಾಯಕ ನಾಗೋಲಿ ಅವರು 2,353 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಎದುರಾಳಿ ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ ನಾಯಕ 8,529 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. 

ಈ ಹಿಂದೆ ಕ್ಯಾದಿಗೇರಾ ಜಿಲ್ಲಾ ಪಂಚಾಯತ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿ ಅಭ್ಯರ್ಥಿ ವೆಂಕಟೇಶ ಪೂಜಾರಿ ಅವರು ಈಚೆಗೆ ನಡೆದ ವಿಧಾನಸಭೆ  ಚುನಾವಣೆ ಸಂದರ್ಭದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಜೆಡಿಎಸ್  ಸೇರ್ಪಡೆಯಾಗಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದ ಕ್ಷೇತ್ರಕ್ಕೆ ಈಗ ಚುನಾವಣೆ ನಡೆಯಿತು. 

ಜಿಲ್ಲಾ ಪಂಚಾಯತ ಉಪಚುನಾವಣೆಗೆ ಜೆಡಿಎಸ್‌ನಿಂದ ಯಾವ ಅಭ್ಯರ್ಥಿಯೂ ಸ್ಪರ್ಧಿಸಿರಲಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry