ದೋಸ್ತಿ ಸರ್ಕಾರದ ವಿರುದ್ಧ ರೈತ ಮೋರ್ಚಾ ಹೋರಾಟ

7

ದೋಸ್ತಿ ಸರ್ಕಾರದ ವಿರುದ್ಧ ರೈತ ಮೋರ್ಚಾ ಹೋರಾಟ

Published:
Updated:

ಬೆಂಗಳೂರು: ರಾಜ್ಯದ ರೈತರ ಸಮಸ್ಯೆಗಳನ್ನು ಅರಿಯಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರು ತಂಡಗಳನ್ನು ರಚಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ.

ರೈತ ಮೋರ್ಚಾ ಅಧ್ಯಕ್ಷ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಈ ತಂಡಗಳು ಇದೇ 30ರ ವರೆಗೆ ರಾಜ್ಯದಾದ್ಯಂತ ಪ್ರವಾಸ ಮಾಡಲಿವೆ.

‘ಈ ತಂಡಗಳು ಸಾಲ ಮನ್ನಾಕ್ಕೆ ಆಗ್ರಹಿಸಿ ಮೈತ್ರಿ ಸರ್ಕಾರದ ವಿರುದ್ಧ ರೈತರನ್ನು ಹುರಿದುಂಬಿಸಬೇಕು. ಆಯಾ ಜಿಲ್ಲೆಯ ರೈತರ ಸಮಸ್ಯೆಗಳನ್ನು ಪಟ್ಟಿ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ರೈತರಿಗೆ ನೀಡಿರುವ ಯೋಜನೆಗಳ ಮನವರಿಕೆ ಮಾಡಬೇಕು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸುವಂತೆ ರೈತರಿಗೆ ಮನವಿ ಮಾಡಬೇಕು’ ಎಂದು ಮುಖಂಡರೊಬ್ಬರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry