ಫೇಸ್‌ಬುಕ್‌ನಲ್ಲಿ ಹಿಂದೂ ದೇವರ ಅವಹೇಳನ: ಪ್ರಕರಣ ದಾಖಲು

7

ಫೇಸ್‌ಬುಕ್‌ನಲ್ಲಿ ಹಿಂದೂ ದೇವರ ಅವಹೇಳನ: ಪ್ರಕರಣ ದಾಖಲು

Published:
Updated:

ಮಂಗಳೂರು: ಬಶೀರ್ ಅಡ್ಯಾರ್‌ ಎಂಬ ಫೇಸ್‌ಬುಕ್‌ ಖಾತೆಯ ಮೂಲಕ ಹಿಂದೂ ದೇವರ ಚಿತ್ರವನ್ನು ಪ್ರಧಾನಿ ಮೋದಿ ಅವರ ಚಿತ್ರದ ಜೊತೆಗೆ ಫೋಟೊಶಾಪ್‌ ಮಾಡಿ ಅಪ್‌ಲೋಡ್‌ ಮಾಡಿರುವುದರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಗಣೇಶ್‌ ಎಂಬುವವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಬರ್ಕೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ಹನುಮಂತರಾಯಪ್ಪ ತಿಳಿಸಿದ್ದಾರೆ.

ಫೇಸ್‌ಬುಕ್‌ ಅಥವಾ ವಾಟ್ಸ್‌ಆ್ಯಪ್‌ ಮೂಲಕ ಈ ಆಕ್ಷೇಪಾರ್ಹ ವಿಚಾರವನ್ನು ಸ್ನೇಹಿತರೊಂದಿಗೆ ಹಂಚಿಕೊಳ್ಳುವುದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಜನರು ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry