ಭಾರತ ಫುಟ್‌ಬಾಲ್‌ ತಂಡಕ್ಕೆ ಅನುಮತಿ

7

ಭಾರತ ಫುಟ್‌ಬಾಲ್‌ ತಂಡಕ್ಕೆ ಅನುಮತಿ

Published:
Updated:
ಭಾರತ ಫುಟ್‌ಬಾಲ್‌ ತಂಡಕ್ಕೆ ಅನುಮತಿ

ನವದೆಹಲಿ: ಮುಂಬರುವ ಏಷ್ಯನ್‌ ಕ್ರೀಡಾಕೂಟದಲ್ಲಿ ಭಾಗವಹಿಸಲು ಭಾರತ ಪುರುಷರ ಫುಟ್‌ಬಾಲ್‌ ತಂಡಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

‘ಪುರುಷರ ತಂಡದವರು ಏಷ್ಯನ್‌ ಕ್ರೀಡಾಕೂಟದಲ್ಲಿ ಭಾಗವಹಿಸುವುದು ಖಚಿತವಾಗಿದೆ. ಆದರೆ ಮಹಿಳಾ ತಂಡವನ್ನು ಕಳುಹಿಸುವ ಬಗ್ಗೆ ಇನ್ನೂ ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ’ ಎಂದು ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ನ (ಎಐಎಫ್‌ಎಫ್‌) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದಿದ್ದ ಇಂಟರ್‌ ಕಾಂಟಿನೆಂಟಲ್‌ ಕಪ್‌ ಟೂರ್ನಿಯಲ್ಲಿ ಭಾರತ ತಂಡ ಪ್ರಶಸ್ತಿ ಗೆದ್ದಿತ್ತು. ಆಗ ಮುಖ್ಯ ಕೋಚ್‌ ಸ್ಟೀಫನ್‌ ಕಾನ್‌ಸ್ಟೆಂಟೈನ್ ಅವರು ತಂಡವನ್ನು ಏಷ್ಯನ್‌ ಕ್ರೀಡಾಕೂಟಕ್ಕೆ ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry