ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಟ್ಸ್‌ಆ್ಯಪ್‌ ಪಾವತಿ ಸೇವೆ ದೇಶದಲ್ಲಿ 10 ಲಕ್ಷ ಮಂದಿ ಬಳಕೆ

Last Updated 17 ಜೂನ್ 2018, 18:35 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ 10 ಲಕ್ಷ ಜನರು ವಾಟ್ಸ್‌ಆ್ಯಪ್‌ ಪ್ರಾಯೋಗಿಕ ಹಂತದ ಪಾವತಿ ಸೇವೆಯನ್ನು ಬಳಸುತ್ತಿದ್ದಾರೆ ಎಂದು ವಾಟ್ಸ್‌ಆ್ಯಪ್‌ ಹೇಳಿದೆ.

ಬಳಕೆದಾರರಿಂದ ಸಕಾರಾತ್ಮಕ ಸ್ಪಂದನೆ ಸಿಗುತ್ತಿದೆ. ಸಂದೇಶ ಕಳಿಸುವಷ್ಟೇ ಸರಳ ಮತ್ತು ಸುರಕ್ಷಿತವಾಗಿ ಜನರು ಹಣ ಕಳುಹಿಸುತ್ತಿದ್ದಾರೆ ಎಂದು ವಾಟ್ಸ್‌ಆ್ಯಪ್‌ನ ವಕ್ತಾರರೊಬ್ಬರು ಹೇಳಿದ್ದಾರೆ.

ಪ್ರಾಯೋಗಿಕ ಹಂತದಲ್ಲಿ ಸೇವೆಯ ಬಳಕೆ ಲಭ್ಯವಿದೆ. ಈ ಸೇವೆಯನ್ನು ಹೆಚ್ಚಿನ ಜನರಿಗೆ ಸಿಗುವಂತೆ ಮಾಡಲು ಮತ್ತು ಡಿಜಿಟಲ್‌ ಇಂಡಿಯಾಕ್ಕೆ ಬೆಂಬಲ ನೀಡುವ ಉದ್ದೇಶದಿಂದ ಭಾರತ ಸರ್ಕಾರ, ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ಮತ್ತು ಬ್ಯಾಂಕ್‌ ಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಕೆಗೆ ಬಿಡುಗಡೆ ಮಾಡುವ ದಿನಾಂಕವನ್ನು ಕಂಪನಿ ತಿಳಿಸಿಲ್ಲ. ಹೀಗಿದ್ದರೂ ಕೆಲವೇ ವಾರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT