‘ಪಹಣಿ ದೋಷ ತಿದ್ದುಪಡಿಗೆ ಕ್ರಮ’

7

‘ಪಹಣಿ ದೋಷ ತಿದ್ದುಪಡಿಗೆ ಕ್ರಮ’

Published:
Updated:

ಸಾಗರ: ಪಹಣಿಪತ್ರದಲ್ಲಿನ ದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ತುರ್ತು ಕ್ರಮ ಕೈಗೊಳ್ಳುತ್ತಿದೆ ಎಂದು ಕಂದಾಯ ಇಲಾಖೆ ಪ್ರಾದೇಶಿಕ ಆಯುಕ್ತ ಶಿವಯೋಗಿ ಸಿ.ಕಳಸದ್ ಹೇಳಿದರು.

ಭಾನುವಾರ ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಅವರು, ಪಹಣಿಯಲ್ಲಿನ ದೋಷಗಳನ್ನು ಸರಿಪಡಿಸಲು ಅಗತ್ಯವಿದ್ದರೆ ಸ್ಥಳ ತನಿಖೆ ನಡೆಸಿ ವರದಿ ಸಲ್ಲಿಸಲು ಇಲ್ಲಿನ ಅಧಿಕಾರಿಗಳಿಗೆ ಇಲಾಖೆ ಸೂಚನೆ ನೀಡಿದೆ ಎಂದು ಹೇಳಿದರು.

ರಾಜ್ಯದಲ್ಲಿ ಹೊಸದಾಗಿ ಘೋಷಣೆಯಾಗಿರುವ ತಾಲ್ಲೂಕುಗಳಿಗೆ ವಿಶೇಷ ತಹಶೀಲ್ದಾರ್ ನೇಮಕ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಶಿರಸ್ತೇದಾರ್ ಹುದ್ದೆಯನ್ನು ಶೀಘ್ರ ತುಂಬಲಾಗುವುದು. ಇತರ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಲಿದೆ ಎಂದರು.

ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡ ಪ್ರಕರಣಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕಂದಾಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಮಳೆಯಿಂದ ಹಾನಿ ಅನುಭವಿಸುವ ರೈತರಿಗೆ ಶೀಘ್ರವಾಗಿ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಫಸಲ್‌ ಬಿಮಾ ಯೋಜನೆ ಅವಧಿ ಜೂನ್‌ 30ಕ್ಕೆ ಕೊನೆಗೊಳ್ಳುತ್ತಿದ್ದು, ರೈತರು ಇದರ ಪ್ರಯೋಜನ ಪಡೆಯಬೇಕು ಎಂದರು.

ಉಪವಿಭಾಗಾಧಿಕಾರಿ ನಾಗರಾಜ್ ಆರ್.ಸಿಂಗ್ರೇರ್, ಪ್ರಭಾರ ತಹಶೀಲ್ದಾರ್ ಟಿ. ಪರಮೇಶ್ವರ್, ಕಂದಾಯ ಇಲಾಖೆ ಕಲ್ಲಪ್ಪ ಮೆಣಸಿನಹಾಳ್ ಇದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry