ಅರಣ್ಯ ಒತ್ತುವರಿ ತೆರವಿಗೆ ಕ್ರಮ: ಸಚಿವ ಶಂಕರ್

7
10 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿರುವ ಗುತ್ತಿಗೆ ನೌಕರರನ್ನು ಕಾಯಂಗೊಳಿಸುವ ಕಡೆಗೆ ಗಮನ

ಅರಣ್ಯ ಒತ್ತುವರಿ ತೆರವಿಗೆ ಕ್ರಮ: ಸಚಿವ ಶಂಕರ್

Published:
Updated:
ಅರಣ್ಯ ಒತ್ತುವರಿ ತೆರವಿಗೆ ಕ್ರಮ: ಸಚಿವ ಶಂಕರ್

ದಾವಣಗೆರೆ: ರೈತರಿಗೆ ಅನ್ಯಾಯ ಆಗದ ರೀತಿಯಲ್ಲಿ ಅರಣ್ಯ ಒತ್ತುವರಿ ತೆರವುಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಆರ್.ಶಂಕರ್ ತಿಳಿಸಿದರು.

ಅರಣ್ಯ ಇಲಾಖೆಯಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಡು ಒತ್ತುವರಿ ಆಗುವುದನ್ನು ತಡೆಯುವುದು ಹಾಗೂ ಒತ್ತುವರಿ ತೆರವುಗೊಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ರೈತರಿಗೆ ಭೂಮಿ ಹಂಚುವ ಬಗ್ಗೆ ಕೆಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಕುರಿತು ಬಾಕಿ ಇರುವ ಕಡತಗಳನ್ನು ಶೀಘ್ರವೇ ಪರಿಶಿಲಿಸಿ, ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.

10ರಿಂದ 20 ವರ್ಷಗಳ ಕಾಲ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಕಾಯಂಗೊಳಿಸುವ ಬಗ್ಗೆ ವಿಶೇಷ ಗಮನ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ನಿಯಮಾವಳಿಗಳನ್ನು ಉಲ್ಲಂಘಿಸಿ ಪರಿಸರ ಮಾಲಿನ್ಯ ಮಾಡುತ್ತಿರುವ ಕಾರ್ಖಾನೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು, ಕಾರ್ಖಾನೆ ಮುಚ್ಚಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಚಿವರು ಬಳಿಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೂ ತೆರಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಗತಿಯ ವಿವರ ಪಡೆದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !