ಜಮ್ಮು ಕಾಶ್ಮೀರ: ನಾಲ್ವರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ

7
ರಂಜಾನ್ ನಂತರದ ಮೊದಲ ಕಾರ್ಯಾಚರಣೆ

ಜಮ್ಮು ಕಾಶ್ಮೀರ: ನಾಲ್ವರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ

Published:
Updated:
ಜಮ್ಮು ಕಾಶ್ಮೀರ: ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜಮ್ಮುಕಾಶ್ಮೀರ: ಭಾರತೀಯ ಸೇನೆ ಉತ್ತರ ಕಾಶ್ಮೀರದ ಬಾಂಡೀಪೋರದಲ್ಲಿ ಸೋಮವಾರ ಬೆಳಿಗ್ಗೆ ನಡೆಸಿದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈದಿದೆ.

ರಂಜಾನ್ ಹಬ್ಬದ ನಂತರ ನಡೆದ ಮೊದಲ ಉಗ್ರ ನಿಗ್ರಹ ಕಾರ್ಯಾಚರಣೆ ಇದಾಗಿದೆ.  ಉಗ್ರರ ಮತ್ತು ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.

ಉ‌ಗ್ರರನ್ನು ಹತ್ತಿಕ್ಕಲು ಬೇಕಾದ ಕ್ರಮಗಳನ್ನು ಕೈಗೊಳ್ಳುವಂತೆ ಭದ್ರತಾ ಪಡೆಗೆ ಗೃಹ ಸಚಿವಾಲಯ ಮನವಿ ಮಾಡಿದ ಬೆನ್ನಲ್ಲೇ ಯೋಧರು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ.

ಕಳೆದ ವಾರ ಇಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಇಬ್ಬರು  ಉಗ್ರರು ಹತ್ಯೆಯಾಗಿದ್ದರು. ಒಬ್ಬ ಯೋಧ ಹುತಾತ್ಮರಾಗಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !