ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಲಗಲಿ ಜಿ.ಪಂ: ಮತ್ತೆ ಕಾಂಗ್ರೆಸ್ ಮಡಿಲಿಗೆ

ಬಿಜೆಪಿ ಅಭ್ಯರ್ಥಿ ವಿರುದ್ಧ 1,247 ಮತಗಳ ಅಂತರದ ಗೆಲುವು ಸಾಧಿಸಿದ ಮಗಿಯಪ್ಪ ದೇವನಾಳ
Last Updated 18 ಜೂನ್ 2018, 9:30 IST
ಅಕ್ಷರ ಗಾತ್ರ

ಬಾಗಲಕೋಟೆ: ಬೀಳಗಿ ತಾಲ್ಲೂಕಿನ ಗಲಗಲಿಯ ಜಿಲ್ಲಾ ಪಂಚಾಯ್ತಿ (ಪರಿಶಿಷ್ಟ ಪಂಗಡ) ಮೀಸಲು ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ನಗೆ ಬೀರಿದೆ.

ಕಾಂಗ್ರೆಸ್‌ನ ಮಗಿಯಪ್ಪ ದೇವನಾಳ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ 1,247 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮಗಿಯಪ್ಪ 11,583 ಮತಗಳನ್ನು ಪಡೆದರೆ ಪರಾಜಿತ ಬಿಜೆಪಿ ಅಭ್ಯರ್ಥಿ ಚನ್ನಪ್ಪ ಜಮಖಂಡಿ 10,336 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಜಿಲ್ಲಾ ಪಂಚಾಯ್ತಿಯಲ್ಲಿ ಕಾಂಗ್ರೆಸ್‌ನ ಅಧಿಪತ್ಯ ಮತ್ತೆ ಮುಂದುವರೆಯಲಿದೆ.

ಕಾಂಗ್ರೆಸ್ ಪಕ್ಷದಿಂದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ವೆಂಕನಗೌಡರ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ಬೀಳಗಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ಮತ ಎಣಿಕೆ ನಡೆಯಿತು. ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಗುಲಾಲು ಎರಚಿಕೊಂಡು, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಒಟ್ಟು 36 ಸದಸ್ಯ ಬಲ ಹೊಂದಿರುವ ಬಾಗಲಕೋಟೆ ಜಿಲ್ಲಾ ಪಂಚಾಯ್ತಿ ಸದಸ್ಯರಲ್ಲಿ ಕಾಂಗ್ರೆಸ್ 17 ಬಿಜೆಪಿ -18 ಹಾಗೂ ಒಬ್ಬರು ಪಕ್ಷೇತರ- ಅಭ್ಯರ್ಥಿ ಆಯ್ಕೆಗೊಂಡಿದ್ದರು. ಅಂದು ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕಾಗಿತ್ತು. ಆದರೆ ಬಿಜೆಪಿಯ ಸದಸ್ಯೆ ಭಾಗ್ಯಶ್ರೀ ಜಂಬಗಿ ಗೈರು ಹಾಜರಾಗಿದ್ದರಿದ್ದರು. ಈ ವೇಳೆ ಪಕ್ಷೇತರ ಅಭ್ಯರ್ಥಿ ಮುತ್ತಪ್ಪ ಕೋಮಾರ ಬೆಂಬಲ ನೀಡಿದ್ದರಿಂದ ಕಾಂಗ್ರೆಸ್ ಪಕ್ಷದಿಂದ ವೀಣಾ ಕಾಶಪ್ಪನವರ ಅಧಿಕಾರದ ಗದ್ದುಗೆ ಏರಿದ್ದರು. ಈಗ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿರುವುದರಿಂದ ವೀಣಾ ಕಾಶಪ್ಪನವರ ನಿರಾಳರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT