ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಪೊಲೀಸರಿಂದ ದೈಹಿಕ ಹಿಂಸೆ: ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆ

7

ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಪೊಲೀಸರಿಂದ ದೈಹಿಕ ಹಿಂಸೆ: ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆ

Published:
Updated:
ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಪೊಲೀಸರಿಂದ ದೈಹಿಕ ಹಿಂಸೆ: ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆ

ಬೆಂಗಳೂರು: 'ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪದಲ್ಲಿ ಬಂಧನದಲ್ಲಿರುವ ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್, ಮನೋಹರ್ ಯಡವೆ, ಅಮೋಲ್ ಕಾಳೆ ಮತ್ತು ಅಮಿತ್ ರಾಮಚಂದ್ರ ದೇಗ್ವೆಕರ್ ಅವರಿಗೆ ಪೊಲೀಸರು ದೈಹಿಕವಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ವಿಷಯವನ್ನು ಮ್ಯಾಜಿಸ್ಟ್ರೇಟ್ ಗಮನಕ್ಕೆ ತಂದರೂ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿಲ್ಲ' ಎಂದು ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಲಾಗಿದೆ.

ಈ ಸಂಬಂಧ ಸಲ್ಲಿಸಲಾಗಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೆ‌.ಎನ್.ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

'ಅರ್ಜಿದಾರರ ಅಕ್ಷೇಪಣೆ ಬಗ್ಗೆ 1ನೇ ಹಾಗೂ 3ನೇ ಎಸಿಎಂಎಂ ಕೋರ್ಟ್‌‌ಗಳಿಂದ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆದು ನ್ಯಾಯಾಲಯಕ್ಕೆ ಒದಗಿಸಿ' ಎಂದು ಸರ್ಕಾರಿ ವಕೀಲರಿಗೆ ನ್ಯಾಯಪೀಠ ನಿರ್ದೇಶಿಸಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry