7

ಹಿಂದುಳಿದ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಪುಟ್ಟಸ್ವಾಮಿ ರಾಜೀನಾಮೆ

Published:
Updated:
ಹಿಂದುಳಿದ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಪುಟ್ಟಸ್ವಾಮಿ ರಾಜೀನಾಮೆ

ಬೆಂಗಳೂರು: ವಿಧಾನಪರಿಷತ್ತಿಗೆ ಮತ್ತೊಮ್ಮೆ ಸದಸ್ಯರನ್ನಾಗಿ ಮಾಡಲಿಲ್ಲ ಎಂಬ ಕಾರಣಕ್ಕೆ ಮುನಿಸಿಕೊಂಡಿರುವ ಬಿಜೆಪಿಯ ಹಿರಿಯ ನಾಯಕ ಬಿ.ಜೆ.ಪುಟ್ಟಸ್ವಾಮಿ ಅವರು ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಸಂಬಂಧ ಸೋಮವಾರ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

‘ಹಿಂದುಳಿದ ವರ್ಗಗಳ ಪ್ರತಿನಿಧಿಯಾಗಿ ಆ ವರ್ಗದ ಹಕ್ಕುಗಳು ಮತ್ತು ಸ್ಥಾನಮಾನಕ್ಕಾಗಿ 45 ವರ್ಷಗಳ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಶ್ರಮಿಸಿದ್ದೇವೆ. ಪಕ್ಷದ ಬಲವರ್ಧನೆಗೆ ದುಡಿದಿದ್ದೇನೆ. ನಿಮ್ಮ ಮೇಲೆ ಆಪಾದನೆಗಳು ಬಂದಾಗಲೂ ಪ್ರಾಣ ಒತ್ತೆ ಇಟ್ಟು ನೇರವಾಗಿ ಮತ್ತು ಮಾಧ್ಯಮಗಳಲ್ಲಿ ಸಮರ್ಥನೆ ಮಾಡಿಕೊಂಡಿದ್ದೇನೆ. ನನ್ನ ಮನೆಯ ಮೇಲೂ ದಾಳಿ ನಡೆದರೂ ನಿಷ್ಠೆ ಬದಲಿಸಲಿಲ್ಲ’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

‘ಯಾವ ಮಾನದಂಡ ಅನುಸರಿಸಿ ವಿಧಾನಪರಿಷತ್ತಿಗೆ ಆಯ್ಕೆ ಮಾಡಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ವಿಧಾನಪರಿಷತ್ತಿನ ಸದಸ್ಯತ್ವ ಮುಂದುವರಿಸುವುದರ ಜೊತೆಗೆ ಪಕ್ಷವನ್ನು ಪರಿಣಾಮಕಾರಿಯಾಗಿ ಸಮರ್ಥಿಸಲು ವಿಪಕ್ಷ ನಾಯಕನನ್ನಾಗಿ ಮಾಡುವ ಭರವಸೆ ನೀಡಿದ್ದಿರಿ. ಕೊಟ್ಟ ಮಾತಿಗೆ ತಪ್ಪಿದ್ದಕ್ಕೆ ಕಾರಣ ತಿಳಿಯುತ್ತಿಲ್ಲ’ ಎಂದು ಪುಟ್ಟಸ್ವಾಮಿ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry