ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿ.ಎಂ. ಕುರ್ಚಿ ಸಾಕು ಎಂಬ ಸ್ಥಿತಿಯಲ್ಲಿ ಕುಮಾರಸ್ವಾಮಿ’

Last Updated 18 ಜೂನ್ 2018, 17:34 IST
ಅಕ್ಷರ ಗಾತ್ರ

ಮೊಳಕಾಲ್ಮುರು: ‘ರಾಜ್ಯದಲ್ಲಿ ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದ ದಿನಗಳಲ್ಲಿ 5 ವರ್ಷ ತಾನೇ ಮುಖ್ಯಮಂತ್ರಿ ಎಂದು ಹೇಳುತ್ತಿದ್ದ ಎಚ್‌.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಈಗ ಒಂದು ವರ್ಷಕ್ಕೆ ಕುಸಿದಿರುವುದು ದುರದೃಷ್ಟಕರ’ ಎಂದು ಶಾಸಕ ಬಿ. ಶ್ರೀರಾಮುಲು
ವ್ಯಂಗ್ಯವಾಡಿದರು.

ಸೋಮವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರೈತರ ಎಲ್ಲ ಬಗೆಯ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿ, ಈಗ ಮೀನಮೇಷ ಎಣಿಸುತ್ತಿದ್ದಾರೆ. ಸಾಲ ಮನ್ನಾ ವಿಚಾರದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ವೃಥಾ ಕಸರತ್ತು ನಡೆಯುತ್ತಿದ್ದು, ಇದನ್ನು ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ. 6 ತಿಂಗಳ ನಂತರ ಮುಖ್ಯಮಂತ್ರಿ ಕುರ್ಚಿಯೇ ಸಾಕು ಎಂಬಮಾತು ಕುಮಾರಸ್ವಾಮಿ ತುಟಿ ಅಂಚಿನಲ್ಲಿದೆ’ ಎಂದು ಅವರು ಕುಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT