ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಟೋಕ್ಸ್‌, ವೋಕ್ಸ್‌ ಅಲಭ್ಯ

Last Updated 18 ಜೂನ್ 2018, 17:53 IST
ಅಕ್ಷರ ಗಾತ್ರ

ಲಂಡನ್‌: ಇಂಗ್ಲೆಂಡ್‌ ತಂಡದ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ ಮತ್ತು ವೇಗದ ಬೌಲರ್‌ ಕ್ರಿಸ್‌ ವೋಕ್ಸ್‌ ಅವರು ಆಸ್ಟ್ರೇಲಿಯಾ ಎದುರಿನ ಏಕದಿನ ಕ್ರಿಕೆಟ್‌ ಸರಣಿಗೆ ಅಲಭ್ಯರಾಗಿದ್ದಾರೆ.

ಈ ವಿಷಯವನ್ನು ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ಸೋಮವಾರ ತಿಳಿಸಿದೆ. ಆಸ್ಟ್ರೇಲಿಯಾ ಎದುರಿನ 5 ಪಂದ್ಯಗಳ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್‌ ತಂಡ ಗೆದ್ದಿದೆ.

‘ಪಾಕಿಸ್ತಾನ ಎದುರಿನ ಟೆಸ್ಟ್‌ ಸರಣಿಯ ವೇಳೆ ಸ್ಟೋಕ್ಸ್‌ ಅವರ ಮಂಡಿಗೆ ಗಾಯವಾಗಿತ್ತು. ಇದರಿಂದ ಇನ್ನೂ ಚೇತರಿಸಿಕೊಂಡಿಲ್ಲ. ಅವರು ಪುನಶ್ಚೇತನಾ ಶಿಬಿರದಲ್ಲಿ ಭಾಗವಹಿಸಲಿದ್ದು ಮುಂದಿನ ತಿಂಗಳು ನಡೆಯುವ ಭಾರತದ ಎದುರಿನ ಟ್ವೆಂಟಿ–20 ಕ್ರಿಕೆಟ್‌ ಸರಣಿಯ ವೇಳೆಗೆ ಚೇತರಿಸಿಕೊಳ್ಳಲಿದ್ದಾರೆ’ ಎಂದು ಇಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.

‘29ರ ಹರೆಯದ ವೋಕ್ಸ್‌, ತೊಡೆಯ ಸ್ನಾಯು ಸೆಳೆತದಿಂದ ಬಳಲುತ್ತಿದ್ದಾರೆ. ಅವರಿಗೆ ವಿಶ್ರಾಂತಿ ನೀಡುವಂತೆ ತಂಡದ ವೈದ್ಯರು ತಿಳಿಸಿದ್ದಾರೆ. ಸ್ಟೋಕ್ಸ್‌ ಅವರು ಮುಂದಿನ ತಿಂಗಳು ನಡೆಯುವ ಭಾರತದ ಎದುರಿನ ಏಕದಿನ ಸರಣಿಯಲ್ಲೂ ಆಡುವುದು ಅನುಮಾನ’ ಎಂದೂ ಪ್ರಕಟಣೆಯಲ್ಲಿ ಹೇಳಲಾಗಿದೆ.

ಭಾರತ ಮತ್ತು ಇಂಗ್ಲೆಂಡ್‌ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಜುಲೈ 12ರಿಂದ ಟ್ರೆಂಟ್‌ ಬ್ರಿಡ್ಜ್‌ ಮತ್ತು ನಾಟಿಂಗ್‌ಹ್ಯಾಮ್‌ನಲ್ಲಿ ಜರುಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT