21ರಂದು ‘ವಿಶ್ವ ಯೋಗ ದಿನ’

7

21ರಂದು ‘ವಿಶ್ವ ಯೋಗ ದಿನ’

Published:
Updated:

ಬೆಂಗಳೂರು: ಯುವಜನ ಮತ್ತು ಕ್ರೀಡಾ ಸಚಿವಾಲಯದ ವತಿಯಿಂದ ಜೂನ್‌ 21ರಂದು ಬೆಳಿಗ್ಗೆ 7 ಗಂಟೆಗೆ ‘ವಿಶ್ವ ಯೋಗ ದಿನಾಚರಣೆ’ ನಡೆಯಲಿದೆ.

‘ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಗುರೂಜಿ ಆಶ್ರಮದಲ್ಲಿ ಕಾರ್ಯಕ್ರಮ ಆರಂಭವಾಗಲಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಭಾಗವಹಿಸಲಿದ್ದಾರೆ. ಇದೇ ವೇಳೆ ಯೋಗದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುತ್ತದೆ’ ಎಂದು ರಾಜ್ಯ ನೆಹರೂ ಕೇಂದ್ರ ಸಂಘಟನೆ ನಿರ್ದೇಶಕ ಸುನಿಲ್‌ ಮಲ್ಲಿಕ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಎನ್‌ಸಿಸಿ, ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌ನ 2,500 ಯುವಕರು ಪಾಲ್ಗೊಳ್ಳಲಿದ್ದಾರೆ. ಯೋಗದ ಮಹತ್ವ ತಿಳಿಸುವುದು, ವಿಶ್ವ ಶಾಂತಿ ಸಂದೇಶ ಸಾರುವುದೇ ಕಾರ್ಯಕ್ರಮದ ಉದ್ದೇಶ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry