ಶಿಕ್ಷಕರ ನೇಮಕಾತಿ ಫಲಿತಾಂಶ ಪ್ರಕಟ

7

ಶಿಕ್ಷಕರ ನೇಮಕಾತಿ ಫಲಿತಾಂಶ ಪ್ರಕಟ

Published:
Updated:
ಹತ್ತು ಸಾವಿರ ಶಿಕ್ಷಕರ ನೇಮಕಾತಿ ಫಲಿತಾಂಶ ಪ್ರಕಟ

ಬೆಂಗಳೂರು: ಹತ್ತು ಸಾವಿರ ಶಿಕ್ಷಕರ ನೇಮಕಾತಿಯ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಳಿಕ ಎನ್. ಮಹೇಶ್ ಮಂಗಳವಾರ ಪ್ರಕಟಿಸಿದರು.

ನಗರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, '1:2 ಅನುಪಾತದಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಅವರಲ್ಲಿ ಎಷ್ಟು ಜನ ಬರುತ್ತಾರೆ ಎಂದು ಡಿಡಿಪಿಐಗಳು ಪರಿಶೀಲಿಸಿ, (1:1) ಅನುಪಾತದಲ್ಲಿ ಜುಲೈ 29ಕ್ಕೆ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ’ ಎಂದು ಹೇಳಿದರು.

‘ಆಗಸ್ಟ್ 5ರಿಂದ ಅವರಿಗೆ ಕೌನ್ಸೆಲಿಂಗ್ ನಡೆಯಲಿದೆ. ಈ ಎಲ್ಲಾ ಪ್ರಕ್ರಿಯೆ ಎರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ’ ಎಂದರು.

‘ಖಾಲಿಯಿರುವ ಎಲ್ಲಾ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. 10 ಸಾವಿರ ಪದವೀಧರ ಶಿಕ್ಷಕರು ಕೆಲಸಕ್ಕೆ ಸೇರಿದ ತಕ್ಷಣ ಅತಿಥಿ ಶಿಕ್ಷಕರು ಹುದ್ದೆ ರದ್ದಾಗಲಿದೆ’ ಎಂದು ಹೇಳಿದರು.

 

ಬರಹ ಇಷ್ಟವಾಯಿತೆ?

 • 7

  Happy
 • 1

  Amused
 • 1

  Sad
 • 0

  Frustrated
 • 2

  Angry

Comments:

0 comments

Write the first review for this !