ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆಗೆ ನೀರು ಹರಿಸಲು ಆದ್ಯತೆ ನೀಡಿ

ತಾಲ್ಲೂಕುಮಟ್ಟದ ಅಧಿಕಾರಿಗಳ ಪರಿಚಯ ಸಭೆ
Last Updated 19 ಜೂನ್ 2018, 10:18 IST
ಅಕ್ಷರ ಗಾತ್ರ

ಮಳವಳ್ಳಿ: ರೈತರ ಬೆಳೆಗೆ ಸಮರ್ಪಕ ನೀರು ಪೂರೈಸಲು ನೀರಾವರಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕ ಡಾ.ಕೆ.ಅನ್ನದಾನಿ ತಾಕೀತು ಮಾಡಿದರು.

ಪಟ್ಟಣ್ಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕುಮಟ್ಟದ ಅಧಿಕಾರಿಗಳ ಪರಿಚಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕಾರಿಗಳ ಪರಿಚಯ ಹಾಗೂ ಇಲಾಖೆಗಳ ಮಾಹಿತಿ ತಿಳಿಯಲು ಸಭೆ ಕರೆಯಲಾಗಿದೆ. ಪ್ರತಿಯೊಂದು ಕಾಲುವೆ ಸೇರಿದಂತೆ ಕೆರೆ–ಕಟ್ಟೆಗಳಿಗೆ ನೀರು ತುಂಬಿಸಬೇಕಿದೆ. ಸಮಸ್ಯೆಗಳಿರುವ ನಾಲೆಗಳನ್ನು ವೀಕ್ಷಿಸಿ ನೀರಿನ ಸಮಸ್ಯೆ ಬಗೆಹರಿಸಲಾಗುವುದು ಎಂದು ಅವರು ತಿಳಿಸಿದರು.

ಸಾರ್ವಜನಿಕರಿಗೆ ಅನುಕೂಲವಾಗು ವಂತೆ ಕೊಳ್ಳೇಗಾಲಕ್ಕೆ ಹೋಗುವ ಕೆಎಸ್ಆರ್‌ಟಿಸಿ ಬಸ್ಸುಗಳು ಬೆಳಕವಾಡಿ ಮಾರ್ಗವಾಗಿಯೇ ಹೋಗಬೇಕು. ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ಸಮರ್ಪಕ ಬಿತ್ತನೆ ಬೀಜ ವಿತರಣೆ ಮಾಡಬೇಕು. ತಾಲ್ಲೂಕು ಆಸ್ಪತ್ರೆಯಲ್ಲಿರುವ ಸಮಸ್ಯೆಗಳ ಬಗ್ಗೆ ಅಪಾರ ದೂರುಗಳು ಬರುತ್ತಿವೆ. ವೈದ್ಯಾಧಿಕಾರಿಗಳು ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ಸಿಗುವಂತೆ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.

ಹಿಂದಿನ ತಮ್ಮ ಅಧಿಕಾರದ ಅವಧಿಯಲ್ಲಿ ಎನ್ಇಎಸ್ ಬಡಾವಣೆಯಲ್ಲಿ ನಿರ್ಮಿತವಾಗಿರುವ ಪಾರ್ಕ್‌ಗಳನ್ನು ಅಭಿವೃದ್ಧಿಗೊಳಿಸದಿರುವ ಬಗ್ಗೆ ಪುರಸಭೆ ಅಧಿಕಾರಿಯನ್ನು ಅವರು ತರಾಟೆಗೆ ತೆಗೆದುಕೊಂಡರು.ಇನ್ನು ಮುಂದೆ ಪುರಸಭೆಯಲ್ಲಿ ಪಾರ್ಕ್‌ಗಳ ಅಭಿವೃದ್ಧಿಗೆ ಹಣ ಮೀಸಲಿಡಬೇಕು ಎಂದು ಹೇಳಿದರು.

ಪಟ್ಟಣದ ಬೀರೇಶ್ವರ ದೇವಸ್ಥಾನದ ಹತ್ತಿರ ಹಂಚಿಕೆಯಾಗಿ ರುವ ನಿವೇಶನವನ್ನು ಅರ್ಹ ಫಲಾನುಭವಿಗಳಿಗೆ ಖಾತೆ ಮಾಡಿಸಿಕೊಡ ಬೇಕು ಎಂದು ಸೂಚಿಸಿದರು.

ಶೌಚಾಲಯ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ಜೊತೆಗೆ ಮತ್ತೆರಡು ಶೌಚಾಲಯಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಾರ್ವಜನಿಕರ ಕೊಂದು–ಕೊರತೆಗಳನ್ನು ಆಲಿಸಲು ಕಾಲ್‌ಸೆಂಟರ್ ಮತ್ತು ವೆಬ್‌ಸೈಟ್‌ಗಳನ್ನು ಆರಂಭಿಸಿ ಸಮಸ್ಯೆ ನಿವಾರಣೆಗೆ ಮುಂದಾಗು ವುದಾಗಿ ಅವರು ತಿಳಿಸಿದರು. ಮುಂದಿನ ದಿನಗಳಲ್ಲಿ ಪ್ರತಿಯೊಂದು ಹಳ್ಳಿಗಳಿಗೆ ಅಧಿಕಾರಿ ಗಳೊಂದಿಗೆ ಪ್ರವಾಸ ಕೈಗೊಂಡು ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡುವ ಯೋಜನೆಯಿದೆ. ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗುತ್ತೇನೆ ಎಂದು ಹೇಳಿದರು.

ರೇಷ್ಮೆ ಮಾರುಕಟ್ಟೆಯನ್ನು ಹೈಟೆಕ್ ಮಾದರಿಯಲ್ಲಿ ಅಭಿವೃದ್ಧಿಗೊಳಿಸಲು ಚಿಂತನೆ ನಡೆಸಲಾಗಿದೆ. ಅಗತ್ಯ ಸೌಲಭ್ಯಗಳಿಗಾಗಿ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.

ತಾಲ್ಲೂಕಿನ ಬಾಳೆಹೊನ್ನಿಗ ಗ್ರಾಮದಲ್ಲಿ ಪ್ರಕೃತಿ ವಿಕೋಪದ ಅಡಿಯಲ್ಲಿ ಮನೆ ಕಳೆದುಕೊಂಡ 24 ನಿರಾಶ್ರಿತರಿಗೆ ₹ 99,700 ಮೊತ್ತದ ಪರಿಹಾರದ ಚೆಕ್ ಅನ್ನು ವಿತರಿಸಲಾಯಿತು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೋಶಿ, ತಹಶೀಲ್ದಾರ್, ಚಂದ್ರಮೌಳಿ, ಇದ್ದರು.

ಕಚೇರಿ ಉದ್ಘಾಟನೆ ಇಂದು : ತಾಲ್ಲೂಕು ಪಂಚಾಯಿತಿಯಲ್ಲಿ ಜೂನ್‌ 19ರಂದು ಬೆಳಿಗ್ಗೆ 10ಕ್ಕೆ ಶಾಸಕರ ಕಚೇರಿ ಉದ್ಘಾಟನೆ ನಡೆಯಲಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT