ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಬರ್‌ ಅಪರಾಧದ ವಿರುದ್ಧ ಸಂಘಟಿತ ಹೋರಾಟಕ್ಕೆ ಆಸಿಯಾನ್ ನಾಯಕರು ಒಪ್ಪಿಗೆ

Published 10 ಮೇ 2023, 14:43 IST
Last Updated 10 ಮೇ 2023, 14:43 IST
ಅಕ್ಷರ ಗಾತ್ರ

ಲಬುವಾನ್‌ ಬಜೊ, ಇಂಡೋನೇಷ್ಯಾ (ಎಪಿ): ಗಡಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಿಗಿಗೊಳಿಸಲು ಮತ್ತು ಸಾರ್ವಜನಿಕ ಶೈಕ್ಷಣಿಕ ವ್ಯವಸ್ಥೆಯನ್ನು ಸುಧಾರಿಸಲು ಆಸಿಯಾನ್‌ ರಾಷ್ಟ್ರಗಳ (ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ) ನಾಯಕರು ಒಪ್ಪಿಗೆ ನೀಡಿದ್ದಾರೆ ಎಂದು ಗುರುವಾರ ನಡೆಯಲಿರುವ ಪ್ರಾದೇಶಿಕ ಶೃಂಗದಲ್ಲಿ ಅಂಗೀಕರಿಸಲಿರುವ ಕರಡು ನಿರ್ಣಯದಲ್ಲಿ ತಿಳಿಸಲಾಗಿದೆ.

ಆಗ್ನೇಯ ಏಷ್ಯಾ ದೇಶಗಳ ಕಾರ್ಮಿಕರನ್ನು ಅಪಹರಿಸಿ ಬೇರೆ ದೇಶಗಳಿಗೆ ಕೊಂಡೊಯ್ದು ಅಲ್ಲಿ ಆನ್‌ಲೈನ್‌ ವಂಚನೆಯಲ್ಲಿ ತೊಡಗುವಂತೆ ಒತ್ತಾಯಿಸುವ ದಂಧೆಯ ವಿರುದ್ಧ ಹೋರಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅದರಲ್ಲಿ ತಿಳಿಸಲಾಗಿದೆ.

ಇಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾಗಿದ್ದ ಆಸಿಯಾನ್‌ ನಾಯಕರು, ಇಲ್ಲಿಂದ ಅಪಹರಿಸುವ ವ್ಯಕ್ತಿಗಳನ್ನು ತಂತ್ರಜ್ಞಾನದ ದುರ್ಬಳಕೆ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT