ಚೆನ್ನೈ: ಮದ್ಯದಂಗಡಿ ತೆರೆಯುವ ವಿಚಾರವಾಗಿ ನಟ ರಜನಿಕಾಂತ್ ಅವರು ತಮಿಳುನಾಡು ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

ಈ ಸಂದರ್ಭ ತಮಿಳುನಾಡಿನಲ್ಲಿ ಮತ್ತೆ ಮದ್ಯದಂಗಡಿ ತೆರೆಯಲು ಮುಂದಾದರೆ, ಮರಳಿ ಅಧಿಕಾರಕ್ಕೆ ಬರುವ ಕನಸನ್ನು ಕಾಣುವುದು ಬಿಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ರಜನಿಕಾಂತ್ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಭಾನುವಾರ ಬೆಳಗ್ಗೆ ತಮಿಳಿನಲ್ಲಿ ಟ್ವೀಟ್ ಮಾಡಿರುವ ಅವರು, 'ಈ ಸಂದರ್ಭದಲ್ಲಿ ಮತ್ತೆ ಮದ್ಯದಂಗಡಿ ತೆರೆಯಲು ಮಂದಾದರೆ, ಎಐಎಡಿಎಂಕೆ ಸರ್ಕಾರ ಮರಳಿ ಅಧಿಕಾರಕ್ಕೆ ಬರುವ ಕನಸು ಕಾಣಲು ಸಾಧ್ಯವಿಲ್ಲ. ಬೊಕ್ಕಸ ತುಂಬಿಸಿಕೊಳ್ಳಲು ದಯಮಾಡಿ ಬೇರೆ ಮಾರ್ಗ ಹುಡುಕಿರಿ' ಎಂದು ಹೇಳಿದ್ದಾರೆ.

ಲಾಕ್ಡೌನ್ ಇರುವ ವರೆಗೆ ರಾಜ್ಯದಲ್ಲಿ ಎಲ್ಲ ಮದ್ಯದಂಗಡಿಗಳನ್ನು ಮುಚ್ಚಬೇಕು ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು

‘ಮದ್ರಾಸ್ ಹೈಕೋರ್ಟ್ ನಿನ್ನೆ ನೀಡಿರುವ ಆದೇಶ ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದೇವೆ’ ಎಂದು ಸರ್ಕಾರದ ಪರ ವಕೀಲರೊಬ್ಬರು ಶನಿವಾರ ತಿಳಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.