ವಿಡಿಯೊದ ಕೀಫ್ರೇಮ್ ಅನ್ನು ರಿವರ್ಸ್ ಇಮೇಜ್ ಸರ್ಚ್‌ಗೆ ಒಳಪಡಿಸಿದಾಗ, ಅದು ಖಬರ್ ಪದಂಪುರ್ ಮತ್ತು ಗ್ರಾಮೀಣ್ ಎನ್ನುವ ಫೇಸ್‌ಬುಕ್ ಪುಟಗಳಿಗೆ ಸಂಪರ್ಕ ಕಲ್ಪಿಸಿತು. ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಉದ್ಯಮಿಯಿಂದ ಹಣ ವಸೂಲಿ ಮಾಡುತ್ತಿದ್ದ ಗುಂಪನ್ನು ಬಂಧಿಸಲಾಗಿದೆ ಎಂದು ಅದರಲ್ಲಿ 2025ರ ಜೂನ್ 5ರಂದು ಉಲ್ಲೇಖಿಸಲಾಗಿತ್ತು. ಗೂಗಲ್‌ನಲ್ಲಿ ಹುಡುಕಾಡಿದಾಗ ಇದಕ್ಕೆ ಸಂಬಂಧಿಸಿದ ಒಂದು ಮಾಧ್ಯಮ ವರದಿಯೂ ಸಿಕ್ಕಿತು. ವಸೂಲಿಕೋರರನ್ನು ಪೊಲೀಸರು ಕರೆದೊಯ್ಯುತ್ತಿರುವ ವಿಡಿಯೊ ಅನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂದು ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ವರದಿ ಪ್ರಕಟಿಸಿದೆ.