ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Fact Check: ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ಕೇಂದ್ರ ಅನುಮತಿ ನೀಡಿಲ್ಲ

Last Updated 12 ಮೇ 2021, 19:31 IST
ಅಕ್ಷರ ಗಾತ್ರ

‘ಭಾರತ್ ಬಯೊಟೆಕ್‌ನ ಕೋವಿಡ್‌ ಲಸಿಕೆ ಕೋವ್ಯಾಕ್ಸಿನ್ ಅನ್ನು 12 ವರ್ಷಕ್ಕಿಂತ ದೊಡ್ಡ ಮಕ್ಕಳಿಗೆ ನೀಡಲು ಕೇಂದ್ರ ಸರ್ಕಾರವು ಅನುಮತಿ ನೀಡಿದೆ. ಮಕ್ಕಳಲ್ಲಿ ಈ ಲಸಿಕೆ ಉತ್ತಮವಾಗಿ ಕೆಲಸ ಮಾಡುತ್ತದೆ. ಈ ಲಸಿಕೆ ಪಡೆದುಕೊಳ್ಳುವುದರಿಂದ ಮಕ್ಕಳಲ್ಲಿ ಯಾವುದೇ ತೊಂದರೆ ಆಗುವುದಿಲ್ಲ. ಮಕ್ಕಳಿಗೂ ನೀಡಬಹುದಾದ ಕೋವಿಡ್‌ ಲಸಿಕೆಯನ್ನು ಅಭಿವೃದ್ಧಿಪಡಿಸಿದ ಏಕೈಕ ರಾಷ್ಟ್ರ ಭಾರತ’ ಎಂಬ ವಿವರ ಇರುವ ಟ್ವೀಟ್‌ ಮತ್ತು ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದು ಸುಳ್ಳು ಸುದ್ದಿ. ಇದನ್ನು ಯಾರೂ ನಂಬಬೇಡಿ ಎಂದು ಪಿಐಬಿ ತನ್ನ ಫ್ಯಾಕ್ಟ್‌ಚೆಕ್‌ನಲ್ಲಿ ಹೇಳಿದೆ. ಭಾರತದಲ್ಲಿ ಯಾವ ಲಸಿಕೆಯನ್ನೂ 12-18 ವರ್ಷದ ಮಕ್ಕಳಿಗೆ ಹಾಕಲು ಅನುಮತಿ ನೀಡಿಲ್ಲ. ಭಾರತ್ ಬಯೊಟೆಕ್‌ನ ಕೋವ್ಯಾಕ್ಸಿನ್‌ ಲಸಿಕೆಯನ್ನು 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ನೀಡಲು ಅನುಮತಿ ನೀಡಿಲ್ಲ. ಹೀಗಾಗಿ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್‌ ಲಸಿಕೆ ಕೊಡಿಸಲು ನೋಂದಣಿಗೆ ಪ್ರಯತ್ನಿಸಬಾರದು ಎಂದು ಪಿಐಬಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT