ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

fact check: ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸುವಾಗ ರಾಹುಲ್ ದಿರಿಸು ಬದಲಿಸಿದರೇ?

Last Updated 10 ಅಕ್ಟೋಬರ್ 2022, 17:03 IST
ಅಕ್ಷರ ಗಾತ್ರ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಮ್ಮಿಕೊಂಡಿರುವಭಾರತ್ ಜೋಡೊ ಯಾತ್ರೆಯು ಕೇರಳದ ಗಡಿಯಿಂದ ಕರ್ನಾಟಕವನ್ನು ಪ್ರವೇಶಿಸಿ ಮುನ್ನಡೆಯುತ್ತಿದೆ. ‘ಕೇರಳದಲ್ಲಿ ಯಾತ್ರೆಯ ವೇಳೆ ಪ್ಯಾಂಟ್ ಹಾಗೂ ಟೀಶರ್ಟ್ ಧರಿಸಿದ್ದ ರಾಹುಲ್ ಅವರು ಕರ್ನಾಟಕವನ್ನು ಪ್ರವೇಶಿಸುತ್ತಿದ್ದಂತೆಯೇ ಬಿಳಿ ಕುರ್ತಾ, ಸ್ತೋತ್ರ ಮುದ್ರಿತವಾಗಿರುವ ಶಲ್ಯ ಹಾಗೂ ರುದ್ರಾಕ್ಷಿ ಮಾಲೆ ಧರಿಸಿದ್ದರು. ರಾಹುಲ್ ಅವರು ಬೇರೆ ಬೇರೆ ದಿರಿಸುಗಳಲ್ಲಿ ಕಾಣಿಸಿಕೊಂಡಿರುವ ಎರಡು ಚಿತ್ರಗಳನ್ನು ಕೊಲಾಜ್ ಮಾಡಿ,ಮಲಯಾಳ ಭಾಷೆಯಲ್ಲಿ ಟ್ವೀಟ್ ಮಾಡಲಾಗಿದೆ. ಇದು ಚರ್ಚೆಗೆ ಗ್ರಾಸವಾಗಿದೆ.

ರಾಹುಲ್ ಅವರು ಕೇರಳ ಹಾಗೂ ಕರ್ನಾಟಕದಲ್ಲಿ ಒಂದೇ ರೀತಿಯ ಬಟ್ಟೆ ಧರಿಸಿದ್ದಾರೆ. ಕುರ್ತಾ, ಶಲ್ಯ ಹಾಗೂ ರುದ್ರಾಕ್ಷಿ ಧರಿಸಿರುವ ಚಿತ್ರವು ಯಾತ್ರೆಗೆ ಸಂಬಂಧಿಸಿದ್ದಲ್ಲ ಎಂದು ಇಂಡಿಯಾಟುಡೇ ವರದಿ ಮಾಡಿದೆ. ಉತ್ತರ ಪ್ರದೇಶ ಚುನಾವಣಾ ಪ್ರಚಾರದ ವೇಳೆ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಅವರ ಜೊತೆ ಕಾಶಿ ವಿಶ್ವನಾಥ ಮಂದಿರಕ್ಕೆ ರಾಹುಲ್ ಭೇಟಿ ನೀಡಿದ್ದಾಗ ಈ ಚಿತ್ರವನ್ನು ಸೆರೆಹಿಡಿಯಲಾಗಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿದ್ದ ಚಿತ್ರವನ್ನು ಯಾತ್ರೆಯ ಜೊತೆ ತಪ್ಪಾಗಿ ತಳಕು ಹಾಕಲಾಗಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT