ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ನಲ್ಲಿ ಮಾತನಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘ಇದು ಸಂಸತ್ನ ಕಾನೂನು. ಪ್ರತಿಯೊಬ್ಬರೂ ಇದನ್ನು ಒಪ್ಪಿಕೊಳ್ಳಲೇಬೇಕು’ ಎಂದು ಅವರು ಹೇಳಿರುವುದು ವಿಡಿಯೊದಲ್ಲಿದೆ. ಅವರು ಈ ಮಾತು ಹೇಳಿರುವುದು ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಸಮಾನತೆ ನಿಯಮಾವಳಿಯನ್ನು (2026) ವಿರೋಧಿಸುತ್ತಿರುವವರ ಬಗ್ಗೆ ಎಂದು ಪೋಸ್ಟ್ ಅನ್ನು ಹಂಚಿಕೊಳ್ಳುತ್ತಿರುವವರು ಪ್ರತಿಪಾದಿಸುತ್ತಿದ್ದಾರೆ. ಆದರೆ, ಇದು ಸುಳ್ಳು.

ವಿಡಿಯೊ ಅನ್ನು ಇನ್ವಿಡ್ ಸಾಧನದ ಮೂಲಕ ಪ್ರತ್ಯೇಕಿಸಿ, ಗೂಗಲ್ ಲೆನ್ಸ್ ಮೂಲಕ ಪರಿಶೀಲಿಸಿದಾಗ, ಇದೇ ಪ್ರತಿಪಾದನೆಯೊಂದಿಗೆ ವಿಡಿಯೊ ಅನ್ನು ಹಲವರು ಹಂಚಿಕೊಂಡಿರುವುದು ಕಂಡಿತು. ನಿರ್ದಿಷ್ಟ ಪದದ ಮೂಲಕ ಗೂಗಲ್ನಲ್ಲಿ ಹುಡುಕಾಡಿದಾಗ, 2025ರ ಏ.2ರಂದು ಪ್ರಕಟವಾಗಿದ್ದ ಎನ್ಡಿಟಿವಿ ವರದಿ ಕಂಡಿತು. ‘ಏನು ಬೆದರಿಕೆ ಹಾಕಲು ಹೊರಟಿದ್ದೀರಿ ಸಹೋದರರೇ, ಇದು ಸಂಸತ್ನ ಕಾನೂನು. ಎಲ್ಲರೂ ಇದನ್ನು ಒಪ್ಪಿಕೊಳ್ಳಲೇ ಬೇಕು’ ಎಂದು ವರದಿಗೆ ತಲೆಬರಹ ನೀಡಲಾಗಿದೆ. ಸಂಸತ್ನಲ್ಲಿ ವಕ್ಫ್ ಮಸೂದೆಯ ಮೇಲಿನ ಚರ್ಚೆಯಲ್ಲಿ ವಿರೋಧ ಪಕ್ಷಗಳ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸುವ ವೇಳೆ ಅವರು ಮೇಲಿನಂತೆ ಹೇಳಿದರು ಎಂದು ವರದಿ ಉಲ್ಲೇಖಿಸಿದೆ. ಅಮಿತ್ ಶಾ ಅವರ ಅಧಿಕೃತ ಫೇಸ್ಬುಕ್ ಪುಟದಲ್ಲಿಯೂ ಇದೇ ವಿಡಿಯೊವನ್ನು 2025ರ ಏ.2ರಂದು ಅಪ್ಲೋಡ್ ಮಾಡಿರುವುದು ಕಂಡಿತು. ಹಳೆಯ ವಿಡಿಯೊ ಹಂಚಿಕೊಳ್ಳುವ ಮೂಲಕ ಕೆಲವರು ಸುಳ್ಳು ಪ್ರತಿಪಾದನೆ ಮಾಡುತ್ತಿದ್ದಾರೆ ಎಂದು ಪಿಟಿಐ ಫ್ಯಾಕ್ಟ್ ಚೆಕ್ ವರದಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.