ಹಿರಿಯ ನಾಗರಿಕರಿಗೆ ದೇಶದಾದ್ಯಂತ ವಿಮಾನ, ರೈಲು, ಬಸ್ಗಳಲ್ಲಿ 2025ರ ಜೂನ್ 15ರಿಂದ ಉಚಿತ ಪ್ರಯಾಣದ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ ಎಂದು ಹಲವು ವೆಬ್ಸೈಟ್ಗಳಲ್ಲಿ ಸುದ್ದಿ ಪ್ರಕಟವಾಗಿದೆ. ಅದನ್ನು ಅನೇಕರು ಫೇಸ್ಬುಕ್, ಎಕ್ಸ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಇದು ಸುಳ್ಳು ಸುದ್ದಿ.

ಕೇಂದ್ರ ಸರ್ಕಾರವು ಯೋಜನೆ ಜಾರಿಗೊಳಿಸಿದ್ದರೆ, ಮಾಧ್ಯಮ ಪ್ರಕಟಣೆ ನೀಡುತ್ತದೆ. ಇಲ್ಲವೇ ಅವುಗಳ ವೆಬ್ಸೈಟ್ಗಳಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಆದರೆ, ನಿರ್ದಿಷ್ಟ ಪದಗಳ ಮೂಲಕ ಗೂಗಲ್ ಸರ್ಚ್ ಮಾಡಿದಾಗ, ಹಿರಿಯ ನಾಗರಿಕರಿಗೆ ಉಚಿತ ಪ್ರಯಾಣದ ಯೋಜನೆ ಜಾರಿ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಆದೇಶ/ಪ್ರಕಟಣೆ ನೀಡಿದ ಬಗ್ಗೆ ವರದಿಗಳು ಕಂಡುಬರಲಿಲ್ಲ; ಸಂಬಂಧಪಟ್ಟ ವೆಬ್ಸೈಟ್ಗಳಲ್ಲೂ ಈ ಕುರಿತ ಮಾಹಿತಿ ಸಿಗಲಿಲ್ಲ. ಜತೆಗೆ, ರೈಲ್ವೆ ಇಲಾಖೆ, ಏರ್ ಇಂಡಿಯಾ ಸೇರಿದಂತೆ ಸಂಬಂಧಪಟ್ಟ ಸಂಸ್ಥೆಗಳನ್ನು ಸಂಪರ್ಕಿಸಿದಾಗ ಅಂಥ ಯಾವ ಯೋಜನೆಯನ್ನೂ ಜಾರಿಗೊಳಿಸಿಲ್ಲ ಎಂದು ಅವು ಸ್ಪಷ್ಟನೆ ನೀಡಿದವು. ಯಾವುದೇ ಆಧಾರ ಇಲ್ಲದೇ ಕೆಲವರು ಸುಳ್ಳು ಸುದ್ದಿಯನ್ನು ಹರಡುತ್ತಿದ್ದಾರೆ ಎಂದು ಫ್ಯಾಕ್ಟ್ಲಿ ಫ್ಯಾಕ್ಟ್ಚೆಕ್ ವರದಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.