ಸಿಪಿಎಂ ಮುಖಂಡ ಸೀತಾರಾಮ್ ಯೆಚೂರಿ ಅವರು ಸೆಪ್ಟೆಂಬರ್ 12ರಂದು ಮೃತಪಟ್ಟರು. ಮೃತದೇಹವನ್ನು ಅವರು ಓದಿದ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯಕ್ಕೆ ಶವಪೆಟ್ಟಿಗೆಯಲ್ಲಿ ಒಯ್ದು, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಅಂತಿಮ ನಮನ ಸಲ್ಲಿಸಿದ್ದರು. ಶವಪೆಟ್ಟಿಗೆಯಲ್ಲಿ ಮೃತದೇಹವನ್ನು ಇಡಲಾಗಿರುವ ಫೋಟೊಗಳನ್ನು ಮತ್ತು ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವ ಕೆಲವರು, ಯೆಚೂರಿ ಅವರು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವರಾಗಿದ್ದು, ಹಿಂದೂಗಳನ್ನು ದ್ವೇಷಿಸುತ್ತಿದ್ದರು; ಯೆಚೂರಿ ಅವರು ತಮ್ಮ ರಾಜಕೀಯ ಜೀವನದಲ್ಲಿ ಧರ್ಮವನ್ನು ಮುಚ್ಚಿಟ್ಟಿದ್ದರು ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ, ಅದು ಸುಳ್ಳು ಸುದ್ದಿ.